ಬೆಂಗಳೂರು: ನನ್ನ ಮುಂದಿದ್ದ ಕಾರಿನಲ್ಲಿದ್ದವರನ್ನು ಬಚಾವ್ ಮಾಡಲು ಹೋಗಿ ಹೀಗಾಯ್ತು ಎಂದು ನೆಲಮಂಗಲದಲ್ಲಿ (Nelamangala) ನಡೆದ ಸರಣಿ ಅಪಘಾತದ ಬಗ್ಗೆ ಲಾರಿ ಚಾಲಕ ಆರೀಫ್ ಹೇಳಿದ್ದಾರೆ.
ಆರಿಫ್ ಅವರನ್ನು ಚಿಕಿತ್ಸೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ, ಡಾಬಸ್‌ಪೇಟೆಯಿಂದ ಬೆಂಗಳೂರಿನ ಕಡೆಗೆ ನಾನು ಬರುತ್ತಿದ್ದೆ. ನನ್ನ ಮುಂದಿನ ಕಾರನ್ನು ಸೇಫ್ ಮಾಡಲು ಹೋಗಿ ಹೀಗೆ ಆಗಿದೆ. ಲಾರಿ ಡಿವೈಡರ್ ದಾಟಿ ಮುಂದಿನ ರಸ್ತೆಗೆ ಪಲ್ಟಿ ಆಯ್ತು. ನನ್ನ ಮುಂದಿನ ಕಾರಿನಿಂದಾಗಿ ಹೀಗೆ ಆಯ್ತು. ನನಗೆ ತುಂಬಾ ನೋವಾಗ್ತಿದೆ. ಅಲ್ಲಿ ಏನಾಯ್ತು ಆಮೇಲೆ ಅನ್ನೋದು ಗೊತ್ತಿಲ್ಲ. ಕಾರಿನ ಮೇಲೆ ನನ್ನ ಲಾರಿ ಪಲ್ಟಿಯಾಗಿತ್ತು ಎಂದು ಬೇಸರದಲ್ಲಿ ಮಾತನಾಡಿದ್ದಾರೆ. ಇದನ್ನೂ ಓದಿ: ನೆಲಮಂಗಲದಲ್ಲಿ ಭೀಕರ ಅಪಘಾತ – ಪ್ರವಾಸಕ್ಕೆ ಹೊರಟಿದ್ದ ಒಂದೇ ಕುಟುಂಬದ 6 ಮಂದಿ ದುರ್ಮರಣ
ನೆಲಮಂಗಲದ ಟಿ.ಬೇಗೂರು ಬಳಿಯ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Tumkur Bengaluru National Highway) ಇಂದು ಮಧ್ಯಾಹ್ನ (ಶನಿವಾರ) ನಡೆದ ಎರಡು ಕಾರು, ಎರಡು ಲಾರಿ ಹಾಗೂ ಸ್ಕೂಲ್ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ದುರ್ಮರಣಕ್ಕೀಡಾಗಿದ್ದರು.
ಕಾರಿನ ಮೇಲೆ ಕಂಟೇನರ್ ಬಿದ್ದ ಪರಿಣಾಮ ಕಾರಿನಲ್ಲಿದ್ದ ವಿಜಯಪುರ ಮೂಲದ ಚಂದ್ರಮ್ ಯಾಗಪ್ಪ ಗೋಳ್ (48), ಗೌರಾಬಾಯಿ (42), ದೀಕ್ಷಾ (12), ಜಾನ್ (16), ವಿಜಯಲಕ್ಷ್ಮಿ (36), ಆರ್ಯ (6) ಸಾವನ್ನಪ್ಪಿದ್ದರು.
ಇದರಿಂದ ತುಮಕೂರು ರಸ್ತೆಯಲ್ಲಿ ಸುಮಾರು 10 ಕಿಮೀ ನಷ್ಟು ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇದನ್ನೂ ಓದಿ: ಮಹಿಳೆಯ ಖಾಸಗಿ ಭಾಗಕ್ಕೆ ಸುಡುವ ರಾಡ್‌ನಿಂದ ಹಲ್ಲೆ – ಮೆಣಸಿನ ಪುಡಿ ಹಾಕಿ ವಿಕೃತಿ