ರಾಯಚೂರು: ಕಲುಷಿತ ನೀರು ಕುಡಿದು 12ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ದೇವರಭೂಪುರ ಗ್ರಾಮದಲ್ಲಿ ನಡೆದಿದೆ.
ಬೇಸಿಗೆ ಹಿನ್ನೆಲೆ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಎನ್‍ಆರ್‍ಬಿಸಿ ಕಾಲುವೆ ನೀರು ಕುಡಿದು ಗ್ರಾಮಸ್ಥರು ಅಸ್ವಸ್ಥರಾಗಿದ್ದಾರೆ. ಚಿಕ್ಕಮಕ್ಕಳಿಂದ ಹಿಡಿದು ವಯೋವೃದ್ದರವರೆಗೆ ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಕಲುಷಿತ ನೀರು, ಗ್ರಾಮದಲ್ಲಿನ ನೈರ್ಮಲ್ಯ ಕೊರತೆ ಗ್ರಾಮಸ್ಥರು ಆಸ್ಪತ್ರೆ ಸೇರುವಂತೆ ಮಾಡಿದೆ. ಇನ್ನೂ ಸಾಕಷ್ಟು ಜನರಲ್ಲಿ ಅನಾರೋಗ್ಯ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.
Advertisement
Advertisement
ಲಾಕ್ ಡೌನ್ ಹಿನ್ನಲೆ ಗ್ರಾಮದಿಂದ ಲಿಂಗಸೂಗುರಿಗೆ ತಪಾಸಣೆಗೆ ಬರುವವರನ್ನು ಪೊಲೀಸರು ತಡೆ ಹಿಡಿಯುತ್ತಿದ್ದಾರೆ. ವಾಹನಗಳನ್ನು ಸೀಜ್ ಮಾಡುತ್ತಿದ್ದು, ಗ್ರಾಮಸ್ಥರು ಕಂಗಾಲಾಗಿದ್ದಾರೆ. ಗ್ರಾಮದ ಪರಿಸ್ಥಿತಿ ಅರಿತು ಲಿಂಗಸುಗೂರು ತಹಶೀಲ್ದಾರ್ ಹಾಗೂ ತಾಲೂಕು ಆರೋಗ್ಯಾಧಿಕಾರಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾತ್ಕಾಲಿಕ ಆರೋಗ್ಯ ಕೇಂದ್ರ ತೆರೆಯಲು ಅಧಿಕಾರಿಗಳು ಮುಂದಾಗಿದ್ದಾರೆ.