ಸುಪ್ರೀಂ ಚಾಟಿ ಬೆನ್ನಲ್ಲೇ ದೊಡ್ಡ ಗಾತ್ರದಲ್ಲಿ ಪ್ರಕಟಿಸಿ ಕ್ಷಮೆ ಕೋರಿದ ಪತಂಜಲಿ

Public TV
1 Min Read
baba ramdev acharya balkrishna

ನವದೆಹಲಿ: ಸುಪ್ರೀಂ ಕೋರ್ಟ್‌ (Supreme Court) ತರಾಟೆ ಬೆನ್ನಲ್ಲೇ ಪತಂಜಲಿ (Patanjali) ಸಂಸ್ಥೆ ಪತ್ರಿಕೆಗಳಲ್ಲಿ ದೊಡ್ಡ ಗಾತ್ರದಲ್ಲಿ ಪ್ರಕಟಿಸಿ ಕ್ಷಮೆ (Apology) ಕೇಳಿದೆ.

ಯೋಗ ಗುರು ಬಾಬಾ ರಾಮದೇವ್‌ (Yoga Guru Ramdev) ಮತ್ತು ಆಚಾರ್ಯ ಬಾಲಕೃಷ್ಣ (Acharya Balkrishna) ಅವರು, ನಮ್ಮ ಜಾಹೀರಾತುಗಳನ್ನು ಪ್ರಕಟಿಸುವಲ್ಲಿ ಮಾಡಿದ ತಪ್ಪಿಗೆ ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಮುಂದೆ ಅಂತಹ ದೋಷಗಳು ಪುನರಾವರ್ತನೆಯಾಗುವುದಿಲ್ಲ. ಇದು ನೀಡುತ್ತಿರುವ ಹೃದಯಪೂರ್ವಕ ಬದ್ಧತೆ ಎಂದು ಪ್ರಕಟಿಸಿ ಕ್ಷಮೆ ಕೋರಿದ್ದಾರೆ. ಇದನ್ನೂ ಓದಿ: ವ್ಯಕ್ತಿಯ ಸಾವಿನ ನಂತರವೂ ಆಸ್ತಿ ಕಿತ್ತುಕೊಳ್ಳುವ ಮೂಲಕ ಕಾಂಗ್ರೆಸ್‌ ಲೂಟಿಗೆ ಇಳಿದಿದೆ: ನರೇಂದ್ರ ಮೋದಿ

supreme Court 1

ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ ಈ ಹಿಂದೆ ಪತ್ರಿಕೆಗಳಲ್ಲಿ ಕ್ಷಮೆ ಕೇಳಬೇಕೆಂದು ಸೂಚಿಸಿತ್ತು. ಆದರೆ ಪತಂಜಲಿ ಸಂಸ್ಥೆ ಸಣ್ಣ ಗಾತ್ರದ ಜಾಹೀರಾತು ನೀಡಿ ಕ್ಷಮೆ ಕೇಳಿತ್ತು. ಇದಕ್ಕೆ ಸಿಟ್ಟಾದ ಕೋರ್ಟ್‌ ಜಾಹೀರಾತು ಯಾವ ಗಾತ್ರದಲ್ಲಿ ಪ್ರಕಟವಾಗಿದೆಯೋ ಅದೇ ಗಾತ್ರದಲ್ಲಿ ಕ್ಷಮೆ ಕೇಳುವಂತೆ ಆದೇಶಿಸಿತ್ತು. ಇದನ್ನೂ ಓದಿ: ಚುನಾವಣಾ ಪ್ರಚಾರದ ವೇಳೆ ಪ್ರಜ್ಞೆ ತಪ್ಪಿದ ನಿತಿನ್ ಗಡ್ಕರಿ

ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನ್ಯಾ.ಹಿಮಾ ಕೊಹ್ಲಿ ಮತ್ತು ನ್ಯಾ. ಅಮಾನುಲ್ಲಾ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ನಡೆಯುತ್ತಿದ್ದು ಮುಂದಿನ ವಿಚಾರಣೆಯನ್ನು ಏ.30ಕ್ಕೆ ಮುಂದೂಡಿದೆ. ಅಂದು ನ್ಯಾಯಾಲಯಕ್ಕೆ ಪತಂಜಲಿ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಬಾಲಕೃಷ್ಣ ಹಾಜರಾಗಬೇಕೆಂದು ಸೂಚಿಸಿದೆ.

 

Share This Article