ನ್ಯಾಯಾಂಗ ನಿಂದನೆ ಆರೋಪಕಕ್ಕೆ ಸಂಬಂಧಿಸಿದಂತೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ದೆಹಲಿ ಹೈಕೋರ್ಟಿಗೆ ಬೇಷರತ್ ಕ್ಷಮೆ ಯಾಚಿಸಿದ್ದಾರೆ. ಕ್ಷಮೆ ಕುರಿತಂತೆ ತಮ್ಮ ವಕೀಲರ ಮೂಲಕ ಅವರು ಅಫಿಡವಿಟ್ ಸಲ್ಲಿಸಿದ್ದಾರೆ. ಈ ಹಿಂದೆ ವಿವೇಕ್ ಟ್ವೀಟ್ ಒಂದನ್ನು ಮಾಡಿದ್ದರು. ಆ ಟ್ವೀಟ್ ನಲ್ಲಿ ನ್ಯಾಯಾಂಗ ನಿಂದನೆ ಮಾಡಿದ್ದರು. ಈ ಸಂಬಂಧವಾಗಿ ನ್ಯಾಯಾಲಯವು ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿಕೊಂಡಿತ್ತು.
Advertisement
2018ರಲ್ಲಿ ಭೀಮಾ ಕೋರೆಗಾಂವ್ ಪ್ರಕಣದಲ್ಲಿ ಸಾಮಾಜಿಕ ಕಾರ್ಯಕರ್ತ ಗೌತಮ್ ನವಲಖ ಅವರಿಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ, ನ್ಯಾಯಮೂರ್ತಿಗಳಾದ ಎಸ್.ಮುರುಳೀಧರ್ ಅವರ ಮೇಲೆ ಪಕ್ಷಪಾತದ ಆರೋಪ ಹೊರಿಸುವ ರೀತಿಯಲ್ಲಿ ವಿವೇಕ್ ಅಗ್ನಿಹೋತ್ರಿ ಟ್ವೀಟ್ ಮಾಡಿದ್ದರು. ಆ ಟ್ವೀಟ್ ಅನ್ನು ಸ್ವತಃ ಟ್ವಿಟರ್ ಸಂಸ್ಥೆಯೇ ಡಿಲೀಟ್ ಮಾಡಿತ್ತು. ಇದನ್ನೂ ಓದಿ: ಪ್ರೀ ವೆಡ್ಡಿಂಗ್ ಪಾರ್ಟಿಯಲ್ಲಿ ಮಿಂಚಿದ `ಬಿಂದಾಸ್’ ನಟಿ ಹನ್ಸಿಕಾ ಮೋಟ್ವಾನಿ