ಬೆಳಗಾವಿ: ಶಿಗ್ಗಾಂವಿಯಿಂದ (Shiggaavi) ಸ್ಪರ್ಧೆ ವಿಚಾರ ನನ್ನದಲ್ಲ. ಹೈಕಮಾಂಡ್ ನಾಯಕರು ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ. ಹಲವು ಬಾರಿ ನಮ್ಮ ನಾಯಕರು ಈ ವಿಚಾರ ಹೇಳಿದ್ದಾರೆ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ (Vinay Kulkarni) ಹೇಳಿದರು.
ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಶಿಗ್ಗಾಂವಿಯಿಂದ ಸ್ಪರ್ಧೆ ವಿಚಾರಕ್ಕೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ವಿನಯ್ ಕುಲಕರ್ಣಿ, ಶಿಗ್ಗಾಂವಿಯಿಂದ ಸ್ಪರ್ಧೆ ವಿಚಾರ ನನ್ನದಲ್ಲ. ಹೈಕಮಾಂಡ್ ನಾಯಕರು ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ. ಹಲವು ಬಾರಿ ನಮ್ಮ ನಾಯಕರು ಈ ವಿಚಾರ ಹೇಳಿದ್ದಾರೆ. ನನಗೆ ಧಾರವಾಡ ಪ್ರವೇಶಕ್ಕೆ ಕುತಂತ್ರದಿಂದ ಅವಕಾಶ ನೀಡುತ್ತಿಲ್ಲ. ಸ್ಪರ್ಧೆ ನನ್ನ ಅಪೇಕ್ಷೆಯಲ್ಲ, ಅದು ಹೈಕಮಾಂಡ್ ನಿರ್ಧಾರ ಎಂದರು. ಇದನ್ನೂ ಓದಿ: ರಾಜ್ಯ ರಾಜಕಾರಣಕ್ಕೆ ರಮ್ಯಾ ವಾಪಸ್ – ಬೆಂಗಳೂರಿನಿಂದ ಕಣಕ್ಕೆ?
Advertisement
Advertisement
ಶಿಗ್ಗಾಂವಿಯಲ್ಲೂ ಹಲವು ಆಕಾಂಕ್ಷಿಗಳಿದ್ದಾರೆ. ಅವರಿಗೆ ನೋವು ಮಾಡಿ ಸ್ಪರ್ಧೆ ಮಾಡುವ ಅವಶ್ಯಕತೆ ಇಲ್ಲ. ಪಕ್ಷದ ವರಿಷ್ಠರ ತೀರ್ಮಾನ ಏನು ಆಗಿರುತ್ತದೋ ಅದರಂತೆಯೇ ನಡೆಯುತ್ತೇನೆ. ಸ್ಪರ್ಧೆ ಮಾಡದಂತೆ ಹೇಳಿದರೂ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಲು ಸಿದ್ಧನಾಗಿದ್ದೇನೆ. ಧಾರವಾಡದಿಂದ ಸ್ಪರ್ಧೆ ಮಾಡಬೇಡಿ ಎಂದರೂ ಮಾಡುವುದಿಲ್ಲ ಎಂದು ವಿನಯ್ ಕುಲಕರ್ಣಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯ ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ- ಡಿಕೆಶಿ