ಮಂಡ್ಯ: ಕೆಆರ್‌ಎಸ್ (KRS) ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಡುಗಡೆ ಮುಂದವರಿಕೆಯಾಗಿದ್ದು, ಇಂದು (ಸೋಮವಾರ) 2 ಸಾವಿರ ಕ್ಯೂಸೆಕ್‌ಗೂ ಅಧಿಕ ನೀರು ತಮಿಳುನಾಡಿಗೆ (Tamil Nadu) ಹೋಗುತ್ತಿದೆ.
Advertisement
ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಬೇಕೆಂದು ನಿತರಂತರವಾಗಿ ಹೋರಾಟ ನಡೆಯುತ್ತಿದೆ. ಆದರೆ ಸರ್ಕಾರ ಹೋರಾಟಕ್ಕೆ ಸೊಪ್ಪು ಹಾಕದೆ ತಮಿಳುನಾಡಿಗೆ ನೀರು ಹರಿಸುತ್ತಿದೆ. ಇಂದು ನಾಲೆ ಹಾಗೂ ತಮಿಳುನಾಡಿಗೆ ಸೇರಿ ಡ್ಯಾಂನಿಂದ 5,973 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಡ್ಯಾಂ ಒಳಹರಿವಿನ ಪ್ರಮಾಣ 3503 ಕ್ಯೂಸೆಕ್‌ಗೆ ಕುಸಿತ ಕಂಡಿದ್ದು, 124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ 100.92 ಅಡಿ ಮಾತ್ರ ನೀರು ಸಂಗ್ರಹವಾಗಿದೆ. ಇದನ್ನೂ ಓದಿ: ಮಳೆ ಕೊರತೆ – ಮೂರೇ ದಿನಕ್ಕೆ ಕೆಆರ್‌ಎಸ್ ಒಳಹರಿವಿನಲ್ಲಿ ತೀವ್ರ ಕುಸಿತ
Advertisement
Advertisement
ಕೆಆರ್‌ಎಸ್ ಡ್ಯಾಂನ ಇಂದಿನ ನೀರಿನ ಮಟ್ಟ
ಗರಿಷ್ಠ ಮಟ್ಟ- 124.80 ಅಡಿಗಳು
ಇಂದಿನ ಮಟ್ಟ- 100.92 ಅಡಿಗಳು
ಗರಿಷ್ಠ ಸಾಮರ್ಥ್ಯ- 49.452 ಟಿಎಂಸಿ
ಇಂದಿನ ಸಾಮರ್ಥ್ಯ- 23.539 ಟಿಎಂಸಿ
ಒಳಹರಿವು- 3503 ಕ್ಯೂಸೆಕ್
ಹೊರ ಹರಿವು- 5973 ಕ್ಯೂಸೆಕ್
Advertisement
Web Stories