ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ (ಅ.16ರಂದು) ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ನಗರದಲ್ಲಿ ಭಾರೀ ಅವಾಂತರಗಳು ಸೃಷ್ಟಿಯಾಗಿದ್ದು, ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ.ಇದನ್ನೂ ಓದಿ: 95 ನಿಮಿಷಗಳ ಥ್ರಿಲ್ಲರ್ ‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರ ಈ ವಾರ ತೆರೆಗೆ!
ಮಳೆ ಅಬ್ಬರದ ಹಿನ್ನೆಲೆ ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ (DC Jagadeesh) ರಜೆ ಘೋಷಿಸಿದ್ದು, ಅಂಗನವಾಡಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆ ಮೇರೆಗೆ ನಾಳೆ ಒಂದು ದಿನ ರಜೆ ಘೋಷಣೆ ಮಾಡಲಾಗಿದ್ದು, ಪ್ರಾಥಮಿಕ, ಪ್ರೌಢಶಾಲಾ ಬಿಟ್ಟು ಉಳಿದ ತರಗತಿಗಳು ಎಂದಿನಂತೆ ನಡೆಯಲಿವೆ ಹಾಗೂ ಪದವಿ, ಸ್ನಾತಕೋತ್ತರ ಪದವಿ, ಐಐಟಿ, ಎಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಇಲ್ಲ ಎಂದು ತಿಳಿಸಿದ್ದಾರೆ.
ಎಲ್ಲಾ ಶಾಲೆಗಳಿಗೆ ದಸರಾ ರಜೆ ನೀಡಲಾಗಿದ್ದು, ದಸರಾ ರಜೆ ಕಡಿತ ಮಾಡಿ ತರಗತಿ ನಡೆಸುತ್ತಿರುವ ಶಾಲೆಗಳು ಮಕ್ಕಳ ಹಿತದೃಷ್ಟಿಯಿಂದ ರಜೆ ನೀಡಬೇಕು ಎಂದು ಖಾಸಗಿ ಶಾಲೆಗಳ ಸಂಘಟನೆಗಳು ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿವೆ. ಮಳೆ ಜಾಸ್ತಿಯಿದ್ದರೆ, ಪರಿಸ್ಥಿತಿಗೆ ಅನುಗುಣವಾಗಿ, ಆಯಾ ಪ್ರದೇಶಗಳ ಮಳೆಯ ಪರಿಸ್ಥಿತಿ ನೋಡಿಕೊಂಡು ರಜೆ ನೀಡುವಂತೆ ತಿಳಿಸಿದ್ದು, ಕುಸ್ಮಾ, ಕ್ಯಾಮ್ಸ್, ರುಪ್ಸಾ ಸಂಘಟನೆಗಳು ತಮ್ಮ ಸಂಘಟನೆಗಳ ಶಾಲೆಗಳಿಗೆ ಸೂಚನೆ ನೀಡಿವೆ.ಇದನ್ನೂ ಓದಿ:ಕೋಲಾರ| ಮಳೆ, ಚಳಿಯನ್ನೂ ಲೆಕ್ಕಿಸದೇ ಚಿಕನ್ ಬಿರಿಯಾನಿಗಾಗಿ ಮುಗಿಬಿದ್ದ ಜನ