ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಪರಮೇಶ್ವರ್ ಅವರನ್ನು ಮುಂದುವರೆಸಿ ಎಐಸಿಸಿ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಹಲವು ದಿನಗಳಿಂದ ಇದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ.
ಎಐಸಿಸಿ ಮುಖ್ಯಕಾರ್ಯದರ್ಶಿ ಜನಾರ್ದನ ದ್ವಿವೇದಿ ಹೊರಡಿಸಿದ ಎಐಸಿಸಿ ಅಧಿಕೃತ ಪ್ರಕಟಣೆಯಲ್ಲಿ ಮುಂದಿನ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಸಿದ್ದರಾಮಯ್ಯ ನೇತೃತ್ವದಲ್ಲೇ ಎದುರಿಸಲಿದೆ ಎಂದು ತಿಳಿಸಿದ್ದಾರೆ.
Advertisement
ಕೆಪಿಸಿಸಿ ಅಧ್ಯಕ್ಷರಾಗಿ ಪರಮೇಶ್ವರ್ ಮುಂದುವರಿಯಲಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಪರಮೇಶ್ವರ್ ರಾಜೀನಾಮೆ ನೀಡಲಿದ್ದಾರೆ.
Advertisement
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಜೊತೆ ಎಸ್.ಆರ್. ಪಾಟೀಲ್ ಅವರೂ ಕಾರ್ಯನಿರ್ವಹಿಸಲಿದ್ದಾರೆ. ಉತ್ತರ ಕರ್ನಾಟಕದ ಉಸ್ತುವಾರಿಯಾಗಿ ಎಸ್ ಆರ್ ಪಾಟೀಲ್ ಹಾಗೂ ದಕ್ಷಿಣ ಕರ್ನಾಟಕದ ಉಸ್ತುವಾರಿಯಾಗಿ ದಿನೇಶ್ ಗುಂಡೂರಾವ್ ಕಾರ್ಯನಿರ್ವಹಿಸಲಿದ್ದಾರೆ.
Advertisement
ಮುಂದಿನ ವಿಧಾನ ಸಭೆ ಚುನಾವಣೆಯ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಕಾರ್ಯದರ್ಶಿಯಾಗಿ ಸತೀಶ್ ಜಾರಕಿಹೊಳಿ, ಕಾರ್ಯಕಾರಿ ಸಮಿತಿ ವಿಶೇಷ ಆಹ್ವಾನಿತರಾಗಿ ಕೆ ಎಚ್ ಮುನಿಯಪ್ಪ ಅವರನ್ನು ನೇಮಕಗೊಳಿಸಲಾಗಿದೆ ಎಂದು ಎಐಸಿಸಿ ಮಾಧ್ಯಮ ಪ್ರಕಟಣೆ ತಿಳಿಸಿದೆ.
Advertisement