ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ನಲ್ಲಿ (Electronic City Flyover) ಗುರುವಾರ ರಾತ್ರಿ ಸರಣಿ ಅಪಘಾತ ಸಂಭವಿಸಿದೆ. ಇದರ ಪರಿಣಾಮ ಫ್ಲೈಓವರ್ ಮೇಲೆ ಭಾರೀ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದೆ.
ಕಾರೊಂದು ಅತಿವೇಗವಾಗಿ ಬಂದ ಪರಿಣಾಮ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆ ಕಾರು ಇನ್ನೊಂದು ಫಾರ್ಚುನರ್ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಘಟನೆಯಲ್ಲಿ ಒಟ್ಟು ಮೂರು ಕಾರುಗಳು ಹಾಗೂ ಬೈಕ್ ಜಖಂ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಇದನ್ನೂ ಓದಿ: ಶುಕ್ರವಾರದಿಂದ ಭಾರತ-ಆಸೀಸ್ ನಡುವೆ ಹೈವೋಲ್ಟೇಜ್ ಟೆಸ್ಟ್ ಸರಣಿ – ಕ್ಯಾಪ್ಟನ್ ಬುಮ್ರಾ ಏನ್ ಹೇಳಿದ್ರು?
ಸರಣಿ ಅಪಘಾತದಿಂದಾಗಿ ಫ್ಲೈಓವರ್ ಸುತ್ತಮುತ್ತ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಕಿಲೋಮೀಟರ್‌ಗಟ್ಟಲೆ ವಾಹನಗಳು ನಿಂತಲ್ಲೇ ನಿಂತಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಸ್ಥಳಕ್ಕೆ ಎಲೆಕ್ಟ್ರಾನ್ ಸಿಟಿ ಎಲಿವೇಟೆಡ್ ಫ್ಲೈವರ್ ಸಿಬ್ಬಂದಿ ಆಗಮಿಸಿದ್ದು, ಅಪಘಾತವಾಗಿದ್ದ ವಾಹನಗಳನ್ನು ತೆರವು ಮಾಡಲು ಹರಸಾಹಸಪಟ್ಟಿದ್ದಾರೆ.
ಇನ್ನೂ ಅಪಘಾತವಾದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಪಾಕಿಸ್ತಾನದಲ್ಲಿ ವಾಹನಗಳ ಮೇಲೆ ಭಯೋತ್ಪಾದಕರ ದಾಳಿ – 50 ಜನ ಸಾವು