ಕಲಬುರಗಿ: ಬೀದರ್‌ನ (Bidar) ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆಪ್ತ ರಾಜು ಕಪನೂರ್ ಸೇರಿದಂತೆ 6 ಜನರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಪ್ರಕರಣ ಸಂಬಂಧ ಕಲಬುರಗಿಯ (Kalaburagi) ಸ್ಟೇಷನ್ ಬಜಾರ್ ಪೊಲೀಸರು ನ್ಯಾಯಾಲಯದ ಗಮನಕ್ಕೆ ತಂದು ಎಫ್‍ಐಆರ್ ದಾಖಲಿಸಿದ್ದಾರೆ. ಬಿಎನ್‍ಎಸ್ 351(2) ಅಡಿಯಲ್ಲಿ ಎಫ್‍ಐಆರ್ ದಾಖಲಾಗಿದೆ. ಅಲ್ಲದೇ ಎಫ್‍ಐಆರ್ ಪ್ರತಿಯನ್ನು ಡಿಸಿಪಿ ಕನ್ನಿಕಾ ಸಿಕ್ರಿವಾಲ್ ಅವರು ಪ್ರತಿಭಟನಾ ನಿರತ ಬಿಜೆಪಿ ನಾಯಕರಿಗೆ ನೀಡಿದ್ದಾರೆ.
Advertisement
Advertisement
ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮುನ್ನ ಬರೆದ ಡೆತ್ ನೋಟ್ ರಾಜ್ಯ ರಾಜಕೀಯದಲ್ಲಿ ಕಿಚ್ಚು ಹಚ್ಚಿದೆ. ಬಿಜೆಪಿ ಶಾಸಕ ಮತ್ತಿಮೂಢ್ ಸೇರಿ ಹಲವರ ಕೊಲೆಗೆ ರಾಜು ಕಪನೂರ್ ಸಂಚು ರೂಪಿಸಿರುವುದು ಇದೀಗ ಬಯಲಾಗಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐಗೆ ವಹಿಸಲು ಬಿಜೆಪಿ ಹೋರಾಟಕ್ಕೆ ಮುಂದಾಗಿದೆ.
Advertisement
Advertisement
ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್‍ನಲ್ಲಿ ನನ್ನ ಸಾವಿಗೆ ಕಾಂಗ್ರೆಸ್ ಮುಖಂಡ ರಾಜು ಕಪನೂರ್ ಮತ್ತು ಗ್ಯಾಂಗ್ ಕಾರಣ ಎಂದು ಉಲ್ಲೇಖಿಸಲಾಗಿದೆ. ಅಲ್ಲದೇ ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಢ್, ಆಂದೋಲಾ ಶ್ರೀ, ಕಲಬುರಗಿ ನಗರ ಘಟಕದ ಅಧ್ಯಕ್ಷ ಚಂದು ಪಾಟೀಲ್ ಹಾಗೂ ಚಿತ್ತಾಪುರ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ್ ರಾಠೋಡ್ ಹತ್ಯೆಗೆ ಸುಪಾರಿ ನೀಡಿರುವದರ ಬಗ್ಗೆ ಡೆತ್‍ನೋಟ್‍ನಲ್ಲಿ ಉಲ್ಲೇಖಿಸಲಾಗಿದೆ.