ಹುಬ್ಬಳ್ಳಿ: ಸಚಿವ ಕೆ.ಎಸ್. ಈಶ್ವರಪ್ಪ ಅವರು ಇಂದು ಸಂಜೆ ರಾಜೀನಾಮೆ ನೀಡಲಿದ್ದು, ಸ್ವಯಂ ಪ್ರೇರಣೆಯಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಚಿವ ಈಶ್ವರಪ್ಪ ಅವರು ತೀರ್ಮಾನ ಮಾಡಿದ್ದಾರೆ. ಈ ಬಗ್ಗೆ ನಿನ್ನೆ ರಾತ್ರಿ ಅವರ ಜೊತೆ ಮಾತನಾಡಿದ್ದೇನೆ. ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾಗಿ ತಿಳಿಸಿದ್ದಾರೆ. ಜೊತೆಗೆ ಪ್ರಕರಣವನ್ನು ಆದಷ್ಟು ಬೇಗ ತನಿಖೆ ಮಾಡಿಸಿ ಎಂದು ಮನವಿ ಮಾಡಿದ್ದಾರೆ. ಆದಷ್ಟು ಬೇಗ ಆರೋಪ ಮುಕ್ತನಾಗುವ ವಿಶ್ವಾಸ ಅವರಿಗಿದೆ ಎಂದು ತಿಳಿಸಿದರು.
Advertisement
Advertisement
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣವನ್ನು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸುತ್ತೇವೆ. ಪೊಲೀಸರು ತಮ್ಮ ಕೆಲಸವನ್ನು ಮಾಡಲು ಬಿಡಬೇಕು. ಇಡೀ ಬೆಳವಣಿಗೆ ತನಿಖೆ ಆದ ಮೇಲೆ ಈಶ್ವರಪ್ಪ ಆರೋಪ ಮುಕ್ತರಾಗುತ್ತಾರೆ ಎನ್ನುವ ವಿಶ್ವಾಸವಿದೆ. ಈ ಪ್ರಕರಣದಲ್ಲಿ ಸರ್ಕಾರಕ್ಕೆ ಹಿನ್ನಡೆ, ಮುನ್ನಡೆ ಅನ್ನೊ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಮಂತ್ರಿ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ಘೋಷಣೆ
Advertisement
Advertisement
ಇದೇ ವೇಳೆ ಐಎಎಸ್ ಅಧಿಕಾರಿಯ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್ ಮೇಲೆ ಆರೋಪ ಕೇಳಿ ಬಂದಾಗಿನ ಸಂದರ್ಭವನ್ನು ಪ್ರಸ್ತಾಪಿಸಿ ಜಾರ್ಜ್ ಅವರ ರಾಜೀನಾಮೆ ಪಡೆದಿದ್ದೆರು, ಬಂಧಿಸಿರಲಿಲ್ಲ. ರಾಜ್ಯ ಪೊಲೀಸರು, ಸಿಬಿಐ ಅವರನ್ನು ಬಂಧನ ಮಾಡಿತ್ತಾ ಎಂದು ಪ್ರಶ್ನಿಸಿ ವಿರೋಧ ಪಕ್ಷದವರು ತನಿಖಾಧಿಕಾರಿ, ಜಡ್ಜ್ ಆಗುವ ಅವಶ್ಯಕತೆ ಇಲ್ಲ. ತನಿಖೆಯಿಂದ ಸತ್ಯ ಹೊರ ಬರುತ್ತೆ ಎಂದರು. ಇದನ್ನೂ ಓದಿ: ನಾನು ತಪ್ಪಿತಸ್ಥನಲ್ಲ ನನ್ನ ತಪ್ಪು ಇದ್ದರೆ ಭಗವಂತ ನನಗೆ ಶಿಕ್ಷೆ ಕೊಡಲಿ: ಈಶ್ವರಪ್ಪ