ಬೆಳಗಾವಿ: ಸಚಿವ ಕೆ.ಎಸ್ ಈಶ್ವರಪ್ಪ ಅವರು ನನಗೆ ಏನೂ ಸಂಬಂಧ ಇಲ್ಲ ಎಂದು ಈಗಾಗಲೇ ಹೇಳಿದ್ದಾರೆ. ಹೀಗಾಗಿ ನಾನು ಸಂತೋಷ್ ಪ್ರಕರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೊಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಇನ್ನೂ ಒಂದು ವರ್ಷ ಇದೆ. ಹೀಗಾಗಿ ಪಕ್ಷ ಸಂಘಟನೆ ದೃಷ್ಟಿಯಿಂದ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ ಎಂದರು.
ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಕ್ಕೆ ಮಾತನಾಡಿದ ಅವರು, ನಾನು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೊಡಲ್ಲ. ಈಶ್ವರಪ್ಪ ನನಗೆ ಏನೂ ಸಂಬಂಧ ಇಲ್ಲ ಎಂದು ಹೇಳಿದ್ದಾರೆ. ತನಿಖೆ ಮಾಡಿಸುತ್ತೇನೆ ಎಂದು ಸಿಎಂ ಭರವಸೆ ನೀಡಿದ್ದಾರೆ. ತನಿಖೆ ವರದಿ ಬಂದ ಬಳಿಕ ವಾಸ್ತವ ಹೊರಬರಲಿದೆ. ನಾನು ಕೂಡ ಸಿಎಂ ಜೊತೆಗೆ ಮಾತನಾಡಿದ್ದೇನೆ. ಸಿಎಂ ಕೂಡ ತನಿಖೆ ಆಧರಿಸಿ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ನನ್ನ ಗಂಡನ ಸಾವು ಆತ್ಮಹತ್ಯೆ ಅಲ್ಲ ಕೊಲೆ, ಈಶ್ವರಪ್ಪನಿಗೆ ತಕ್ಕ ಶಿಕ್ಷೆಯಾಗಬೇಕು: ಜಯಶ್ರೀ ಪಾಟೀಲ್
ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ.40 ಪರ್ಸೆಂಟ್ ಆರೋಪ ಮಾಡಿದ್ದ ಬೆಳಗಾವಿ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಾಧ್ಯಮದ ಪ್ರತಿನಿಧಿಗಳಿಗೆ ವಾಟ್ಸಪ್ ಸಂದೇಶ ರವಾನಿಸಿ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುತ್ತೆಗೆದಾರ ಸಂತೋಷ್ ಡೆತ್‍ನೋಟ್‍ನಲ್ಲಿ ಈಶ್ವರಪ್ಪ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಇದನ್ನೂ ಓದಿ: ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್ ಸೂಚನೆ