ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟಿಲ್ ಅಂತ್ಯಕ್ರಿಯೆ ವಿಚಾರದಲ್ಲಿ ಸಂಬಂಧಿಕರ ಮಧ್ಯೆಯೇ ಕೈ ಕೈ ಮಿಲಾಯಿಸುವ ಹಂತಕ್ಕೆ ವಾಗ್ವಾದ ನಡೆದ ಘಟನೆ ಬೆಳಗಾವಿ ಜಿಲ್ಲೆಯ ಬಡಸ ಗ್ರಾಮದಲ್ಲಿ ನಡೆದಿದೆ.
ಸಂತೋಷ್ ಮೃತದೇಹವನ್ನು ಬೆಳಗಾವಿಯಲ್ಲಿರುವ ಅವರ ಮನೆ ಮುಂದೆ ದರ್ಶನಕ್ಕೆ ಇಡಲಾಗಿತ್ತು. ಈ ಸಂದರ್ಭದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ಶಾಸಕಿ ಮಾತನಾಡಿ, ಸಂತೋಷ್ ಆತ್ಮಹತ್ಯೆಗೆ ನ್ಯಾಯ ಸಿಗಬೇಕು. ಜೊತೆಗೆ ಪರಿಹಾರ ಸಿಗಬೇಕು. ಅಲ್ಲಿಯವರೆಗೂ ಸಂತೋಷ್ ಅವರ ಮೃತದೇಹವನ್ನು ಕದಲಿಸುವುದು ಬೇಡಾ ಎಂದು ಹೇಳಿದ್ದಾರೆ.
Advertisement
Advertisement
ಇದಕ್ಕೆ ಪ್ರತಿಕ್ರಿಯಿಸಿದ್ದ ಸಂತೋಷ್ ಸಂಬಂಧಿಗಳು ಅಂತ್ಯಕ್ರಿಯೆ ಮಾಡೋಣ. ಸಂತೋಷ್ ಮೃತದೇಹ ಇಟ್ಟು ಪ್ರತಿಭಟನೆ ಮಾಡುವುದು ಬೇಡ ಎಂದಿದ್ದರು. ಆ ಬಳಿಕ ಸಂತೋಷ್ ಪಾಟೀಲ್ ಸಂಬಂಧೀಕರ ಮಧ್ಯೆಯೇ ಕೈಕೈ ಮಿಲಾಯಿಸುವ ಹಂತಕ್ಕೆ ವಾಗ್ವಾದ ನಡೆದಿದೆ. ಕೂಡಲೇ ಅಲ್ಲಿದ್ದ ಗ್ರಾಮಸ್ಥರು ಮಧ್ಯಸ್ಥಿಕೆ ವಹಿಸಿ ಇಬ್ಬರನ್ನೂ ಶಾಂತ ಪಡಿಸಿದರು. ಇದನ್ನೂ ಓದಿ: ಸಂತೋಷ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆಗ್ರಹ
Advertisement
Advertisement
ಬೆಳಗಾವಿ ತಾಲೂಕಿನ ಬಡಸ ಗ್ರಾಮದ ಮನೆಯಿಂದ ಅಂತ್ಯಕ್ರಿಯೆ ನಡೆಯುವ ಸ್ಥಳಕ್ಕೆ ಸಂತೋಷ್ ಪಾಟೀಲ್ ಅವರ ಮೃತದೇಹ ರವಾನೆ ಆಗಿದೆ. ಗ್ರಾಮದ ಹೊರವಲಯದ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಗ್ರಾಮದ ಪ್ರಮುಖ ರಸ್ತೆಯಲ್ಲಿ ಪಾರ್ಥಿವ ಶರೀರದ ಮೆರವಣಿಗೆ ಮಾಡಲಿದ್ದು, ಲಿಂಗಾಯತ ವಿಧಿ ವಿಧಾನದಂತೆ ನೆರವೇರಲಿರುವ ಸಂತೋಷ ಪಾಟೀಲ್ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಕುಟುಂಬ ಸದಸ್ಯರ ಸಮ್ಮುಖದಲ್ಲಿ ಉಡುಪಿ ಹೋಟೆಲ್‍ನಲ್ಲಿ ಪಂಚನಾಮೆ