ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪಾರದರ್ಶಕ ತನಿಖೆಗೆ ಕೋರಿ ಅವರ ಕುಟುಂಬಸ್ಥರು ರಾಜ್ಯಪಾಲರ ಮೊರೆ ಹೋಗಿದ್ದಾರೆ.
Advertisement
ಪ್ರಮುಖ ಆರೋಪಿ ಕೆ.ಎಸ್ ಈಶ್ವರಪ್ಪ ನಿರ್ದೇಶನದಂತೆ ತನಿಖೆ ನಡೆಯುತ್ತಿದೆ. ಕೇವಲ 15 ದಿನದಲ್ಲಿ ಈ ಪ್ರಕರಣದಲ್ಲಿ ಆರೋಪ ಮುಕ್ತನಾಗಿ ಬರುತ್ತೇನೆ ಎಂದು ಕೆ.ಎಸ್.ಈಶ್ವರಪ್ಪ ನೀಡಿರುವ ಹೇಳಿಕೆಯೇ ಇದಕ್ಕೆ ಸಾಕ್ಷಿ ಎಂದು ಸಂತೋಷ್ ಪತ್ನಿ ರೇಣುಕಾ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಹುಂಡಿ ಎಣಿಕೆಯಲ್ಲಿ ಕೋಟ್ಯಾಧೀಶನಾದ ಮಾದಪ್ಪ – ಎಣಿಕೆ ವೇಳೆ 500 ರೂ.ಗಳ 80 ನೋಟು ಕದ್ದ ಗುತ್ತಿಗೆ ನೌಕರ
Advertisement
Advertisement
ಈಶ್ವರಪ್ಪ ಪ್ರಭಾವಿ ಆಗಿದ್ದು, ಪ್ರಕರಣ ತನಿಖೆ ದಿಕ್ಕು ತಪ್ಪಿಸಿರುವ ಅನುಮಾನ ನಮಗಿದೆ. ಪೊಲೀಸ್ ಅಧಿಕಾರಿಗಳು ಈ ಕೇಸ್‍ನ ಪ್ರತಿ ಹಂತದ ತನಿಖೆಯ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದಾರೆ. ಈಶ್ವರಪ್ಪಗೆ ಅನುಕೂಲ ಮಾಡಿ ಕೇಸ್ ಮುಚ್ಚಿ ಹಾಕುವ ಹುನ್ನಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಪಾರದರ್ಶಕವಾಗಿ ತನಿಖೆ ನಡೆಸುವಂತೆ ತನಿಖಾಧಿಕಾರಿಗಳಿಗೆ ಸೂಚಿಸಲು ರೇಣುಕಾ ಸಂತೋಷ್ ಮನವಿ ಮಾಡಿದ್ದಾರೆ.
Advertisement
Live Tv
[brid partner=56869869 player=32851 video=960834 autoplay=true]