ಬೆಂಗಳೂರು: 40% ಕಮಿಷನ್ ಕಾಂಗ್ರೆಸ್ ಸರ್ಕಾರದಲ್ಲಿಯೂ ಮುಂದುವರಿದಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪ ಮಾಡಿದ್ದಾರೆ.
ಚಾಮರಾಜಪೇಟೆಯ ಗುತ್ತಿಗೆದಾರರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿವಿಧ ಇಲಾಖೆಗಳಲ್ಲಿ ಕರೆದಿರೋ ಪ್ಯಾಕೇಜ್ ಟೆಂಡರ್ ಅನ್ನು ರದ್ದುಗೊಳಿಸುವಂತೆ ಆಗ್ರಹಿಸಿದರು. ಜೊತೆಗೆ ಪ್ರತಿಯೊಂದು ಕಾಮಗಾರಿಗೂ ಪ್ರತ್ಯೇಕ ಟೆಂಡರ್ ಕರೆಯಬೇಕು ಎಂದು ಇದೇ ವೇಳೆ ಒತ್ತಾಯ ಮಾಡಿದರು.
Advertisement
Advertisement
ತಕ್ಷಣ ಪ್ಯಾಕೇಜ್ ಸಿಸ್ಟಮ್ ಸ್ಟಾಪ್ ಮಾಡಿ ಪ್ರತ್ಯೇಕ ಟೆಂಡರ್ ಕರೆಯಬೇಕು. ಕೋಲಾರದಲ್ಲಿ ಪ್ಯಾಕೇಜ್ ಟೆಂಡರ್ ಕರೆದಿದ್ದಾರೆ ಬೇರೆ ಜಿಲ್ಲೆಗಳಲ್ಲೂ ಕರೆದಿದ್ದಾರೆ. ಅಧಿಕಾರಿಗಳಿಂದಲೇ ಭ್ರಷ್ಟಾಚಾರ ಶುರುವಾಗಿದೆ. ಅಧಿಕಾರಿಗಳು ದುಡ್ಡು ಕಲೆಕ್ಟ್ ಮಾಡಿ ರಾಜಕಾರಣಿಗಳಿಗೆ ಕೊಡುತ್ತಿದ್ದಾರೆ. ಈ ಹಿಂದೆ ರಾಜಕಾರಣಿಗಳು ನೇರವಾಗಿ ಕಮಿಷನ್ ತೆಗೆದುಕೊಳ್ಳುತ್ತಿದ್ದರು. ಈಗ ಅಧಿಕಾರಿಗಳು ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ. ಒಟ್ಟಿನಲ್ಲಿ 40% ಕಮಿಷನ್ ಈಗಲೂ ಮುಂದುವರಿದಿದೆ ಎಂದು ದೂರಿದ್ದಾರೆ. ಇದನ್ನೂ ಓದಿ: ನಾನು ಪಾರ್ಲಿಮೆಂಟ್ ಸದಸ್ಯತ್ವ ಕೇಳಿದ್ದೀನಿ: ವಿ ಸೋಮಣ್ಣ
Advertisement
Advertisement
ಅರ್ಹ ಗುತ್ತಿಗೆದಾರರಿಗೆ ಅನ್ಯಾಯ: ವಿವಿಧ ಇಲಾಖೆಯಲ್ಲಿ ನಡೆಯುತ್ತಿರುವ ಅನಾವಶ್ಯಕ ಪ್ಯಾಕೇಜ್ ಟೆಂಡರ್‍ಗಳನ್ನು ಕೂಡಲೇ ಸರ್ಕಾರ ರದ್ದುಗೊಳಿಸಬೇಕು. ಈಗಾಗಲೇ ಹಲವು ಬಾರಿ ಸಿಎಂ ಅವರನ್ನ ಭೇಟಿ ಮಾಡಿದ್ದೇವೆ. ಪ್ಯಾಕೇಜ್ ಟೆಂಡರ್ ರದ್ದುಮಾಡುವಂತೆ ಮನವಿ ಮಾಡಿದ್ದೇವೆ. ಹತ್ತಾರು ಪತ್ರ ಬರೆದು ಸಿಎಂಗೆ ಮನವಿ ಮಾಡಿದ್ದೇವೆ. ಮುಖ್ಯ ಎಂಜಿನಿಯರ್ ಅವರನ್ನ ಪ್ರಶ್ನೆ ಮಾಡಿದ್ರೆ ಮೇಲಾಧಿಕಾರಿಗಳ ಕಡೆ ತೋರಿಸುತ್ತಾರೆ. ಅವರನ್ನ ಕೇಳಿದ್ರೆ ಸಚಿವರು, ಶಾಸಕರ ಕಡೆ ಬೊಟ್ಟು ಮಾಡಿ ತೋರಿಸುತ್ತಾರೆ ಎಂದರು.
ಪೊಲೀಸ್ ವಸತಿ ಗೃಹ ಅಭಿವೃದ್ಧಿ ನಿಗಮ, ಬೆಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಹಲವು ಇಲಾಖೆಗಳಲ್ಲಿ ಪ್ಯಾಕೇಜ್ ಟೆಂಡರ್ ಆಹ್ವಾನ ಬಂದಿದೆ. ಇದರಿಂದ ಸ್ಥಳೀಯ ಗುತ್ತಿಗೆದಾರರಿಗೆ ಮೋಸಗಳಾಗುತ್ತಿದೆ. ನೆರೆ ರಾಜ್ಯದ ಗುತ್ತಿಗೆ ಅನಕೂಲ ಮಾಡಿಕೊಡಲು ಪ್ಯಾಕೇಜ್ ಟೆಂಡರ್ ಮಾಡುತ್ತಿದ್ದಾರೆ. ಪ್ಯಾಕೇಜ್ ಟೆಂಡರ್ ಪದ್ಧತಿ ಭ್ರಷ್ಟಾಚಾರಕ್ಕೆ ಆಸ್ಪದವಾಗಿದೆ. ತಮ್ಮ ಅಪ್ತರಾದ ಗುತ್ತಿಗೆ ಕಾಮಗಾರಿ ನೀಡಲು ಮುಂದಾಗಿದ್ದಾರೆ. ಇದರಿಂದ ಅರ್ಹ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದೆ. ಎಲ್ಲಾ ರೀತಿಯ ಕಾಮಗಾರಿಗಳ ಟೆಂಡರ್ ಮೂಲಕ ಹಂಚಿಕೆ ಮಾಡಿದ್ರೆ ನ್ಯಾಯ ಸಿಗುತ್ತೆ ಎಂದಿದ್ದಾರೆ.
ಸಮಯ ನೋಡಿ ದೂರು: ಪ್ಯಾಕೇಜ್ ಟೆಂಡರ್ ರದ್ದು ಮಾಡದೇ ಇದ್ರೆ ಹೋರಾಟ ಮಾಡಲು ಕರೆ ಕೊಡುತ್ತೇವೆ. ಒಂದು ವಾರದಲ್ಲಿ ಬಿಬಿಎಂಪಿಯಲ್ಲಿ 300 ಕೋಟಿ ಪ್ಯಾಕೇಜ್ ಟೆಂಡರ್‍ನ್ನ ಆಹ್ವಾನಿಸಲಾಗಿದೆ. ಈ ಪ್ಯಾಕೇಜ್ ಟೆಂಡರ್ ಮೇಲೆ ಹಲವು ಅನುಮಾನ ಮೂಡಿದೆ. ನಿಮಗೆ ಕೆಲಸ ಬೇಕು ಅಂದ್ರೆ ಅಧಿಕಾರಿಗಳೇ ಹಣ ಕೇಳುತ್ತಿದ್ದಾರೆ. ಕಾಮಗಾರಿ ಪೂರ್ಣಗೊಳಿಸಿ ಎರಡು ವರ್ಷ ಆದ್ರೂ ಹಣ ಬಿಡುಗಡೆ ಆಗಿಲ್ಲ. 40% ಕಮಿಷನ್ ಮುಂದುವರಿದಿರೋ ಬಗ್ಗೆ ಸಮಯ ನೋಡಿ ದೂರು ಕೊಡುತ್ತೇವೆ. ಯಾರಿಗೂ ಹೆದರಬೇಕಿಲ್ಲ ಎಂದರು.
ಬಿಬಿಎಂಪಿಯಲ್ಲಿ 15 ಚೀಪ್ ಎಂಜಿನಿಯರ್ಸ್ ಇದ್ದಾರೆ. ಅವರು ಪ್ರತಿಯೊಂದು ಟೆಂಡರ್‍ನಲ್ಲಿ ಹಣ ಕೇಳುತ್ತಾರೆ. ಅವರ ಹೆಸರು ಸದ್ಯಕ್ಕೆ ಹೇಳಲ್ಲ. 9 ಸಾವಿರಾರು ಪೇಜ್‍ಗಳ ಮೂಲಕ ದೂರು ಕೊಟ್ಟಿದ್ದೇವೆ. ನಾಗಮೋಹನ್ ದಾಸ್ ಕಮಿಟಿಗೂ ಪ್ರತೀ ಭ್ರಷ್ಟ ಅಧಿಕಾರಿಗಳ ಮಾಹಿತಿ ನೀಡಿದ್ದೇವೆ. ಅದರಲ್ಲಿ ಪ್ರತಿಯೊಂದು ಇಲಾಖೆಯ ಅಧಿಕಾರಿಗಳ ಹೆಸರು ನೀಡಿದ್ದೇವೆ ಎಂದು ತಿಳಿಸಿದರು.
ಇದೇ ವೇಳೆ ನೀವು ಸುಮ್ನೆ ಗಾಳಿಯಲ್ಲಿ ಗುಂಡು ಹೊಡೆಯುತ್ತೀರಿ, ದಾಖಲಾತಿ ಕೊಡಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕೆಂಪಣ್ಣ, ನಾವು 800 ಪುಟಗಳ ದಾಖಲಾತಿ ಕೊಟ್ಟಿದ್ದೇವೆ. ಕೋರ್ಟ್ ಅಲ್ಲಿ ಕೊಡುತ್ತೇವೆ ಎಂದರು.