ಭೋಪಾಲ್: ಹೆದ್ದಾರಿಗಳ ನಿರ್ಮಾಣದಲ್ಲಿ ಭ್ರಷ್ಟಾಚಾರ ಕಂಡುಬಂದಲ್ಲಿ ಗುತ್ತಿಗೆದಾರರ ಮೇಲೆ ಬುಲ್ ಡೋಜರ್ ಓಡಿಸಲಾಗುವುದು ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಹಾಗೂ ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಎಚ್ಚರಿಕೆ ನೀಡಿದ್ದಾರೆ.
ಬೆಟುಲ್ ನಲ್ಲಿ ಅಸಂಘಟಿತ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು, ಸರ್ಕಾರ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಹೆದ್ದಾರಿಗಳ ನಿರ್ಮಾಣದಲ್ಲಿ ಭ್ರಷ್ಟಾಚಾರ ಕಂಡುಬಂದಲ್ಲಿ ಬುಲ್‍ಡೋಜರ್ ಕೆಳಗೆ ಜಲ್ಲಿ ಕಲ್ಲಿನ ಬದಲು ಭ್ರಷ್ಟ ಗುತ್ತಿಗೆದಾರರು ಇರುತ್ತಾರೆ ಎಂದು ಹೇಳಿದ್ದಾರೆ.
Advertisement
ಯಾವೊಬ್ಬ ಗುತ್ತಿಗೆದಾರರು ನನ್ನ ಕಚೇರಿ ಬಳಿ ಬಂದಿಲ್ಲ. ಹೆದ್ದಾರಿಗಳ ಕಾಮಗಾರಿ ಉತ್ತಮವಾಗಿರಬೇಕು. ಸರ್ಕಾರದ ಬಳಿ ಸಾಕಷ್ಟು ಹಣವಿದೆ. ರಸ್ತೆ ಕಾಮಗಾರಿಗಳಿಗೆ ಹಣದ ಕೊರತೆ ಎಂದು ಎದುರಾಗಿಲ್ಲ. ತಂತ್ರಜ್ಞಾನದ ಕೊರತೆ ಹಾಗೂ ತಂತ್ರಜ್ಞಾನವನ್ನು ಬಳಸಿ ಸರಿಯಾದ ದಿಕ್ಕಿನಲ್ಲಿ ಹೋಗುವ ಮೂಲಕ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವಲ್ಲಿ ಸಹಾಯವಾಗಲಿದೆ ಎಂದು ತಿಳಿಸಿದರು.