ನವದೆಹಲಿ: ಬಾಂಗ್ಲಾದೇಶ, ಅಫ್ಘಾನಿಸ್ಥಾನ ಹಾಗೂ ಪಾಕಿಸ್ಥಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ ಪೌರತ್ವ ತಿದ್ದುಪಡಿ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ.
ಈ ದೇಶಗಳಲ್ಲಿ ಅಲ್ಪಸಂಖ್ಯಾತರಾದ ಹಿಂದೂಗಳು, ಸಿಖ್, ಜೈನರು, ಬೌದ್ಧರು, ಪಾರ್ಸಿ ಹಾಗೂ ಕ್ರಿಶ್ಚಿಯನ್ ಸಮುದಾಯ ಕಿರುಕುಳ ಅನುಭವಿಸುತ್ತಿದೆ. ಹೀಗಾಗಿ ಇವರಿಗೆ ಭಾರತದ ಪೌರತ್ವ ನೀಡುವ ಅವಶ್ಯಕತೆ ಇದೆ ಎನ್ನುವುದು ಕೇಂದ್ರದ ವಾದ. ಆದರೆ ಮುಸ್ಲಿಮರನ್ನು ಹೊರಗಡೆ ಇಟ್ಟಿರುವುದು ಸಂವಿಧಾನ ವಿರೋಧಿ ನಡೆ ಎನ್ನುವುದು ವಿಪಕ್ಷಗಳ ಪ್ರತಿವಾದ.
Advertisement
ಭಾರತದ ಪೌರತ್ವ ಪಡೆಯಬೇಕಾದರೆ 12 ವರ್ಷಕ್ಕಿಂತ ಹೆಚ್ಚು ಕಾಲ ದೇಶದಲ್ಲಿ ನೆಲೆಸಿರಬೇಕು ಎನ್ನುವ ನಿಯಮವನ್ನು 6 ವರ್ಷಕ್ಕೆ ಈ ಮಸೂದೆ ಇಳಿಸಿದೆ. ಸೂಕ್ತ ದಾಖಲೆಯ ಅಗತ್ಯತೆಯೂ ಇಲ್ಲದಿದ್ದರೂ ಕೂಡ ಪೌರತ್ವ ಸಿಗಲಿದೆ.
Advertisement
Advertisement
2016ರಲ್ಲಿ ಈ ಮಸೂದೆ ಮೊದಲ ಬಾರಿಗೆ ಲೋಕಸಭೆಯಲ್ಲಿ ಮಂಡನೆಯಾಗಿತ್ತು. ಈ ವೇಳೆ ಕೋಲಾಹಲ ನಡೆದು ಜಂಟಿ ಸಂಸದೀಯ ಸಮಿತಿ ಪರಾಮರ್ಶೆಗೆ ಹೋಗಿತ್ತು. ಈ ಸಮಿತಿ ಈ ವರ್ಷದ ಜನವರಿಯಲ್ಲಿ ವರದಿ ನೀಡಿದ ಬಳಿಕ ಮಸೂದೆ ಮಂಡನೆಯಾಗಿತ್ತು. ಲೋಕಸಭೆಯಲ್ಲಿ ಪಾಸ್ ಆದರೂ ರಾಜ್ಯಸಭೆಯಲ್ಲಿ ಬಹುಮತ ಇಲ್ಲದ ಕಾರಣ ಮಸೂದೆ ಪಾಸ್ ಆಗಿರಲಿಲ್ಲ. ಈ ಸಂದರ್ಭದಲ್ಲಿ 16ನೇ ಲೋಕಸಭೆಯ ಅವಧಿ ಮುಕ್ತಾಯವಾಗಿತ್ತು. ಹೀಗಾಗಿ ಈಗ ತಿದ್ದುಪಡಿ ಮಾಡಿ ಮಂದಿನ ಮಂಗಳವಾರ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗುತ್ತಿದೆ.
Advertisement
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸುವಷ್ಟೇ ಮಹತ್ವದ ಮಸೂದೆ ಇದಾಗಿದೆ. ಹೀಗಾಗಿ ಎಲ್ಲ ಸಂಸದರು ಸದನದಲ್ಲಿ ಹಾಜರಿರಬೇಕು ಎಂದು ಈಗಾಗಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಿಜೆಪಿ ಸಂಸದರಿಗೆ ಸೂಚಿಸಿದ್ದಾರೆ.
ಈ ಮಸೂದೆಯಲ್ಲಿ ಮುಸ್ಲಿಮರನ್ನು ಹೊರಗಿಟ್ಟಿರುವುದು ಸಂವಿಧಾನ ವಿರೋಧಿ ಕ್ರಮ ಎಂದು ವಿಪಕ್ಷಗಳು ಆರೋಪಿಸಿವೆ. ಈ ಮಧ್ಯೆ, ಅಸ್ಸಾಂನಲ್ಲಿ ವಿರೋಧ, ಪ್ರತಿಭಟನೆ ವ್ಯಕ್ತವಾಗಿದೆ. ಮತ್ತಷ್ಟು ವಲಸಿಗರಿಗೆ ಆಶ್ರ ನೀಡೋಕೆ ಸಾಧ್ಯವೇ ಇಲ್ಲ. ಕೇಂದ್ರ ಸರ್ಕಾರ ಈ ಕ್ಷಣವೇ ಬಿಲ್ ಹಿಂಪಡೆಯಬೇಕು ಎಂದು ಅಮಿತ್‍ಶಾ, ಸಿಎಂ ಸರ್ವಾನಂದ ಸೋನಾವಲ್ ಪ್ರತಿಕೃತಿ ದಹಿಸಲಾಗಿದೆ.