ನವದೆಹಲಿ: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಿವಾದಿತ ಹೇಳಿಕೆ ನೀಡಿರುವ ಹಿನ್ನೆಲೆ ಕೋರ್ಟ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ. ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ರಾಗಾ ಸತ್ಯವೇ ನನ್ನ ದೇವರು ಎನ್ನುತ್ತ ಮಹಾತ್ಮ ಗಾಂಧೀಜಿಯವರ ಸಾಲುಗಳನ್ನು ನೆನಪಿಸಿಕೊಂಡಿದ್ದಾರೆ.
ನನ್ನ ಧರ್ಮ ಸತ್ಯ ಮತ್ತು ಅಹಿಂಸೆಯನ್ನು ಆಧರಿಸಿದೆ. ಸತ್ಯವೇ ನನ್ನ ದೇವರು. ಅದನ್ನು ಪಡೆಯುವ ಸಾಧನ ಅಹಿಂಸೆ ಎಂಬ ಬಾಪೂಜಿಯವರ ಸಾಲನ್ನು ರಾಹುಲ್ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.
Advertisement
Advertisement
2019ರ ಲೋಕಸಭಾ ಚುನಾವಣೆಯ ವೇಳೆ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ಗುರುವಾರ ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ – ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ
Advertisement
मेरा धर्म सत्य और अहिंसा पर आधारित है। सत्य मेरा भगवान है, अहिंसा उसे पाने का साधन।
– महात्मा गांधी
— Rahul Gandhi (@RahulGandhi) March 23, 2023
Advertisement
ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಿರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಕೋರ್ಟ್ ರಾಹುಲ್ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿತ್ತು. ತೀರ್ಪು ಪ್ರಕಟವಾಗುವ ಮೊದಲೇ ರಾಹುಲ್ ಗಾಂಧಿ ಕೋರ್ಟ್‌ಗೆ ಹಾಜರಾಗಿದ್ದರು. ಇದನ್ನೂ ಓದಿ: ರಾಹುಲ್‌ಗೆ ಬಿಗ್ ರಿಲೀಫ್ – 30 ದಿನಗಳ ಜಾಮೀನು ಮಂಜೂರು