ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್‌ರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ವ್ಯಾಪಕ ಟೀಕೆಗೆ ಒಳಗಾಗಿರುವ ನೂಪುರ್ ಶರ್ಮಾ ಅವರನ್ನು ಬಿಜೆಪಿ ಅಮಾನತು ಮಾಡಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ವಿರೋಧ ವ್ಯಕ್ತವಾದ ಬಳಿಕ ದೆಹಲಿಯ ಅಧ್ಯಕ್ಷ ಆದೇಶ ಗುಪ್ತಾ ಅವರನ್ನು ಪಕ್ಷದಿಂದ ಹೊರ ಹಾಕಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.
Advertisement
ನೂಪುರ್ ಶರ್ಮಾ ಹೇಳಿಕೆ ವೈರಲ್ ಆಗುತ್ತಿದ್ದಂತೆ ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆದವು, ಬಳಿಕ ಇದು ಅಂತಾರಾಷ್ಟ್ರೀಯ ಸುದ್ದಿಯಾಗಿ ಹೊರಹೊಮ್ಮಿತು. ಈ ಹೇಳಿಕೆ ಗಮನಿಸಿದ ಕತಾರ್, ಸೌದಿ, ಪಾಕಿಸ್ತಾನದಂತಹ ಇಸ್ಲಾಮಿಕ್ ದೇಶಗಳು ವ್ಯಾಪಕವಾದ ವಿರೋಧ ವ್ಯಕ್ತಪಡಿಸಿದವು. ಕತಾರ್ ಭಾರತದ ರಾಯಭಾರಿ ಅಧಿಕಾರಿಯನ್ನು ಕರೆಸಿ ವಿರೋಧವನ್ನು ದಾಖಲು ಮಾಡಿತ್ತು. ಅಂತರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಸೃಷ್ಟಿಯಾದ ಬೆನ್ನಲೆ ಬಿಜೆಪಿ ಶಿಸ್ತು ಪಾಲನ ಸಮಿತಿ ನುಪುರ್ ಶರ್ಮಾ ವಿರುದ್ಧ ಕ್ರಮ ಕೈಗೊಂಡಿದೆ. ಇದನ್ನೂ ಓದಿ: ರಸ್ತೆ ಬದಿಗೆ ಉರುಳಿ ಬಿದ್ದ ಕೆಎಸ್‌ಆರ್‌ಟಿಸಿ ಬಸ್ – ಐವರಿಗೆ ಗಾಯ
Advertisement
Advertisement
ದೆಹಲಿಯಲ್ಲಿ ಸಾಮಾನ್ಯ ಬಿಜೆಪಿ ನಾಯಕಿಯಾಗಿ ಕೆಲಸ ಮಾಡುತ್ತಿದ್ದ ನೂಪುರ್ ಶರ್ಮಾ ತಮ್ಮ ಒಂದು ಹೇಳಿಕೆಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯ ವಿಷಯ ವಸ್ತುವಾಗಿದ್ದಾರೆ. ಬಹಳಷ್ಟು ಜನರು ನೂಪುರ್ ಶರ್ಮಾ ಯಾರು? ಅವರ ರಾಜಕೀಯ ಹಿನ್ನಲೆ ಏನು ಎಂದು ಹುಡುಕಾಡುತ್ತಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆ ಆಕ್ರೋಶ ಹೊರ ಹಾಕಿದ ನಟ ಚೇತನ್ : ಗಾಂಧಿ, ನೆಹರು ನಮ್ ವಿರೋಧಿಗಳು ಎಂದ ನಟ
Advertisement
37 ವಯಸ್ಸಿನ ನೂಪುರ್ ಶರ್ಮಾ, ದೆಹಲಿ ವಿಶ್ವವಿದ್ಯಾನಿಲಯದ ಹಿಂದೂ ಕಾಲೇಜಿನಲ್ಲಿ ಅರ್ಥಶಾಸ್ತ್ರದಲ್ಲಿ ಪದವೀಧರರಾಗಿದ್ದಾರೆ ಮತ್ತು ದೆಹಲಿ ವಿಶ್ವವಿದ್ಯಾನಿಲಯದ ಕಾನೂನು ವಿಭಾಗದಿಂದ ಎಲ್‍ಎಲ್‍ಬಿ ಪದವಿ ಪಡೆದಿದ್ದಾರೆ. ಅಲ್ಲದೇ ಲಂಡನ್‍ನ ಸ್ಕೂಲ್ ಆಫ್ ಎಕನಾಮಿಕ್ಸ್‌ನಿಂದ ಕಾನೂನಿನಲ್ಲಿ ಸ್ನಾತಕೋತ್ತರ ಪದವಿಯನ್ನು ಸಹ ಪಡೆದಿದ್ದಾರೆ.
ವಿದ್ಯಾರ್ಥಿ ನಾಯಕಿಯಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಕಾಂಗ್ರೆಸ್‍ನ ವಿದ್ಯಾರ್ಥಿ ವಿಭಾಗವಾದ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್‍ಎಸ್‍ಯೂಐ) ಕ್ಯಾಂಪಸ್‍ಗಳಲ್ಲಿ ಪ್ರಬಲ ಅಸ್ತಿತ್ವವನ್ನು ಹೊಂದಿದ್ದ ಸಮಯದಲ್ಲಿ ನೂಪುರ್ ಶರ್ಮಾ 2008 ರಲ್ಲಿ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
2015ರಲ್ಲಿ ನವದೆಹಲಿ ಕ್ಷೇತ್ರದಲ್ಲಿ ಆಮ್ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಸ್ಫರ್ಧಿಸಿದ್ದ ನೂಪುರ್ ಶರ್ಮಾ 31,583 ಮತಗಳ ಅಂತರದಿಂದ ಸೋಲನ್ನಪ್ಪಿದ್ದರು. ಭಾರತೀಯ ಜನತಾ ಯುವ ಮೋರ್ಚಾದ ಪ್ರಮುಖ ಮುಖವಾಗಿರುವ ಶರ್ಮಾ ಅವರು ಯುವ ಘಟಕದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ, ಹಾಗೂ ದೆಹಲಿ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಹಲವಾರು ಸ್ಥಾನಗಳನ್ನು ಅಲಂಕರಿಸಿದ್ದಾರೆ.
2017 ರಲ್ಲಿ, ಆಗಿನ ರಾಜ್ಯ ಘಟಕದ ಮುಖ್ಯಸ್ಥ ಮನೋಜ್ ತಿವಾರಿ ಅವರ ತಂಡವನ್ನು ರಚಿಸಿದಾಗ ನೂಪುರ್ ಶರ್ಮಾರನ್ನ ದೆಹಲಿ ಬಿಜೆಪಿಯ ವಕ್ತಾರರನ್ನಾಗಿ ನೇಮಿಸಲಾಯಿತು. ಸೆಪ್ಟೆಂಬರ್ 2020 ರಲ್ಲಿ, ಜೆಪಿ ನಡ್ಡಾ ಅವರ ತಂಡವನ್ನು ಸ್ಥಾಪಿಸಿದಾಗ, ಶರ್ಮಾ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ಆಯ್ಕೆ ಮಾಡಲಾಗಿತ್ತು.