Bengaluru City

ಆಧುನಿಕ ಮಹಿಳೆಯರು ಮದುವೆ ಆದ್ರೆ ಮಕ್ಕಳನ್ನು ಹೆರಲು ಬಯಸಲ್ಲ: ಸುಧಾಕರ್

Published

on

Share this

– ಹೆಚ್ಚಿನವರು ಒಂಟಿಯಾಗಿರಲು ಬಯಸುತ್ತಾರೆ, ಇದು ಒಳ್ಳೆಯದಲ್ಲ

ಬೆಂಗಳೂರು: ಆಧುನಿಕ ಮಹಿಳೆಯರು ಒಂಟಿಯಾಗಿರಲು ಬಯಸುತ್ತಾರೆ. ಮದುವೆ ಆದರೆ ಮಕ್ಕಳನ್ನು ಹೆರಲು ಬಯಸಲ್ಲ. ಇದು ಒಳ್ಳೆಯದಲ್ಲ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದು, ಇದೀಗ ವಿವಾದಕ್ಕೀಡಾಗಿದೆ.

ಭಾನುವಾರ ನಿಮ್ಹಾನ್ಸ್ ನಲ್ಲಿ ನಡೆದ ಅಂತಾರಾಷ್ಟ್ರೀಯ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಚಿವರು, ವಿವಾಹಿತ ಸುಶಿಕ್ಷಿತ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಪೇಚಿಗೆ ಸಿಲುಕಿದ್ದಾರೆ. ಕೂಡು ಕುಟುಂಬಗಳ ನಶಿಸುವಿಕೆ ವಿಚಾರ ಪ್ರಸ್ತಾಪ ವೇಳೆ ಸಚಿವರು ಈ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ: ಎಚ್‍ಡಿಕೆ

ಮುತ್ತಾತ-ಮುತ್ತಜ್ಜಿ ಇರುವುದು ಬಿಡಿ, ನಾವು ನಮ್ಮ ಹೆತ್ತವರು ನಮ್ಮ ಜೊತೆಗೆ ಇರಲು ಬಯಸಲ್ಲ. ಇವತ್ತು ಇದನ್ನು ಹೇಳಲು ಬೇಸರ ಆಗುತ್ತೆ. ಭಾರತದಲ್ಲಿ ಬಹಳಷ್ಟು ಅಧುನಿಕ ಮಹಿಳೆಯರು ಒಂಟಿಯಾಗಿರಲು ಬಯಸ್ತಾರೆ. ಒಂದು ವೇಳೆ ಅವರು ಮದುವೆ ಆದರೂ ಅವರು ಜನ್ಮ ನೀಡಲು ಬಯಸಲ್ಲ. ಅವರು ಬೇರೆಯವರಿಗಾಗಿ ಮಗು ಹೆರಲು ಇಷ್ಟಪಡುತ್ತಾಳೆ. ಹೀಗಾಗಿ ನಮ್ಮ ಆಲೋಚನೆಯಲ್ಲಿ ವಿಚಿತ್ರ ಬದಲಾವಣೆ ಆಗಿದೆ, ಅದು ಒಳ್ಳೆಯದಲ್ಲ ಎಂದಿದ್ದಾರೆ.

ಬಹಳಷ್ಟು ಮಹಿಳೆಯರು ಮದುವೆಯಾದರೂ ಮಕ್ಕಳಿಗೆ ಜನ್ಮ ಕೊಡಲು ಹಿಂಜರಿಯುತ್ತಿದ್ದು, ಬಾಡಿಗೆ ತಾಯಂದಿರಿಂದ ಮಕ್ಕಳನ್ನು ಪಡೆಯುತ್ತಾರೆ. ಅವರ ಆಲೋಚನೆಯ ದೃಷ್ಟಿಕೋನವೇ ಸಂಪೂರ್ಣ ಬದಲಾಗಿದೆ. ಇಂತಹ ದೃಷ್ಟಿಕೋನ ಸೂಕ್ತವಲ್ಲ ಎಂದು ಹೇಳಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಚಿವರ ಹೇಳಿಕೆಗೆ ಭಾರೀ ಆಕ್ರೋಶ ಹಾಗೂ ಟೀಕೆ ವ್ಯಕ್ತವಾಗುತ್ತಿದೆ.

ಸಚಿವರ ಈ ಹೇಳಿಕೆಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮಾಡಿ..

Click to comment

Leave a Reply

Your email address will not be published. Required fields are marked *

Advertisement
Advertisement