ಪಾಟ್ನಾ: ಜನಸಂಖ್ಯೆ ನಿಯಂತ್ರಣದಲ್ಲಿ ಮಹಿಳೆಯರ ಶಿಕ್ಷಣದ ಪಾತ್ರದ ಕುರಿತು ಮಂಗಳವಾರ ಬಿಹಾರದ ಮುಖ್ಯಮಂತ್ರಿ ನೀಡಿರುವ ವಿವಾದಿತ ಹೇಳಿಕೆಗೆ ಅವರು ಕ್ಷಮೆ ಕೇಳಿದ್ದಾರೆ.
ನಾನು ಕ್ಷಮೆ ಕೇಳುತ್ತೇನೆ ಹಾಗೂ ನನ್ನ ಮಾತುಗಳನ್ನು ಹಿಂತೆಗೆದುಕೊಳ್ಳುತ್ತೇನೆ. ನನ್ನ ಮಾತುಗಳು ತಪ್ಪಾಗಿದ್ದರೆ, ಯಾರಿಗಾದರೂ ನೋವಾಗಿದ್ದರೆ, ನಾನು ಕ್ಷಮೆಯಾಚಿಸುತ್ತೇನೆ (Apology) ಎಂದು ನಿತೀಶ್ ಕುಮಾರ್ (Nitish Kumar) ಹೇಳಿಕೆ ನೀಡಿದ್ದಾರೆ.
Advertisement
Advertisement
ನನ್ನ ಮಾತುಗಳು ಯಾರನ್ನೂ ನೋಯಿಸುವ ಉದ್ದೇಶವನ್ನು ಹೊಂದಿರಲಿಲ್ಲ. ಜನಸಂಖ್ಯೆ ನಿಯಂತ್ರಣಕ್ಕೆ ಶಿಕ್ಷಣ ಅಗತ್ಯ ಎಂದು ನಾನು ಹೇಳಿದ್ದೇನೆ. ಮಹಿಳಾ ಸಬಲೀಕರಣ ಮತ್ತು ಮಹಿಳಾ ಅಭಿವೃದ್ಧಿಯ ಪರವಾಗಿ ನಾನು ನಿಂತಿದ್ದೇನೆ ಎಂದು ಬಿಹಾರದ ಮುಖ್ಯಮಂತ್ರಿ ತಮ್ಮ ಮಾತನ್ನು ಸ್ಪಷ್ಟಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಅಮಿತ್ ಶಾ ರಥಕ್ಕೆ ಕರೆಂಟ್ ಶಾಕ್ – ಅಪಾಯದಿಂದ ಪಾರು
Advertisement
ವಿವಾದಿತ ಹೇಳಿಕೆಯೇನು?
ನಿತೀಶ್ ಕುಮಾರ್ ರಾಜ್ಯ ವಿಧಾನಸಭೆಯಲ್ಲಿ ಮಂಗಳವಾರ ಜನಸಂಖ್ಯೆ ನಿಯಂತ್ರಣದ ಕುರಿತು ಮಾತನಾಡುತ್ತಾ ಫಲವತ್ತತೆಯ ದರ 4.2% ರಿಂದ 2.9% ಕ್ಕೆ ಏಕೆ ಕುಸಿದಿದೆ ಎಂಬುದನ್ನು ವಿವರಿಸಿದ್ದರು. ಆಗ ಅವರು, ಜನಸಂಖ್ಯೆ ನಿಯಂತ್ರಣದಲ್ಲಿ ಮಹಿಳೆಯರು ಶಿಕ್ಷಣ ಹೊಂದುವುದು ಮಹತ್ವದ ಪಾತ್ರವಹಿಸುತ್ತದೆ. ಒಬ್ಬ ಸುಶಿಕ್ಷಿತ ಮಹಿಳೆ ಗಂಡ ಲೈಂಗಿಕ ಕ್ರಿಯೆಯಲ್ಲಿ ತೊಡಗದಂತೆ ನಿರ್ಬಂಧ ಹೇರಬಲ್ಲವಳಾಗಿರುತ್ತಾಳೆ. ಜನನ ಪ್ರಮಾಣ ಹೆಚ್ಚಳಕ್ಕೆ ಪತಿಯ ಕೃತ್ಯವೇ ಕಾರಣವಾಗುತ್ತದೆ. ಶಿಕ್ಷಣ ಪಡೆದ ಮಹಿಳೆ ಪತಿಯನ್ನು ತಡೆಯುವ ಕುರಿತು ತಿಳಿದುಕೊಂಡಿರುತ್ತಾಳೆ. ಜನನ ಪ್ರಮಾಣದಲ್ಲಿ ಇಳಿಕೆಯಾಗುವುದಕ್ಕೆ ಮಹಿಳೆಯರು ಶಿಕ್ಷಣ ಪಡೆದಿರುವುದೇ ಕಾರಣ ಎಂದು ಹೇಳಿದ್ದರು.
Advertisement
ನಿತೀಶ್ ಕುಮಾರ್ ಅವರ ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಇದನ್ನು ಬಿಜೆಪಿ ನಾಚಿಕೆಗೇಡು, ಅಸಹ್ಯ ಹಾಗೂ ಅಶ್ಲೀಲ ಎಂದು ಟೀಕಿಸಿದೆ. ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ ನಿತೀಶ್ ಕುಮಾರ್ ಅವರ ಈ ಹೇಳಿಕೆಗೆ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು. ಇದನ್ನೂ ಓದಿ: ಜನಸಂಖ್ಯೆ ನಿಯಂತ್ರಣ ಕುರಿತು ವಿಲಕ್ಷಣ ಹೇಳಿಕೆ – ನಿತೀಶ್ ಕುಮಾರ್ ಅಸಭ್ಯ ನಾಯಕ ಎಂದ BJP