ಬೆಂಗಳೂರು: ಹಿಂದೂ ಪದದ ಅರ್ಥವೇ ಅಶ್ಲೀಲ ಎಂದ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ(Satish Jarkiholi) ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ(Randeep Singh Surjewala) ಖಂಡಿಸಿದ್ದಾರೆ.
Hinduism is a way of life & a civilisational reality. Congress built our Nation to respect every religion, belief & faith. This is the essence of India.
The statement attributed to Satish Jarkiholi is deeply unfortunate & deserves to be rejected. We condemn it unequivocally.
— Randeep Singh Surjewala (@rssurjewala) November 7, 2022
Advertisement
ಹಿಂದೂ ಧರ್ಮ(Hindu Religion) ಒಂದು ಜೀವನ ವಿಧಾನವಾಗಿದೆ. ಪ್ರತಿಯೊಂದು ಧರ್ಮ ಮತ್ತು ನಂಬಿಕೆಯನ್ನು ಗೌರವಿಸಿಕೊಂಡು ಕಾಂಗ್ರೆಸ್ ರಾಷ್ಟ್ರವನ್ನು ನಿರ್ಮಿಸಿದೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ‘ಹಿಂದೂ’ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಪದ – ಅರ್ಥ ಬಹಳ ಅಶ್ಲೀಲವಾಗಿದೆ: ಸತೀಶ್ ಜಾರಕಿಹೊಳಿ
Advertisement
ಸತೀಶ್ ಜಾರಕಿಹೊಳಿ ಅವರ ಹೇಳಿಕೆಯು ಅತ್ಯಂತ ದುರದೃಷ್ಟಕರ ಮತ್ತು ತಿರಸ್ಕಾರ ಅರ್ಹ. ಜಾರಕಿಹೊಳಿ ಅವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ ಎಂದ ಸುರ್ಜೇವಾಲ ತಿಳಿಸಿದ್ದಾರೆ.