Bengaluru CityDistrictsKarnatakaLatestMain Post

ಹಿಂದೂ ಪದದ ಅರ್ಥವೇ ಅಶ್ಲೀಲ – ಜಾರಕಿಹೊಳಿ ಹೇಳಿಕೆಯನ್ನು ಖಂಡಿಸಿದ ಕಾಂಗ್ರೆಸ್‌

ಬೆಂಗಳೂರು: ಹಿಂದೂ ಪದದ ಅರ್ಥವೇ ಅಶ್ಲೀಲ ಎಂದ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ(Satish Jarkiholi) ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ(Randeep Singh Surjewala) ಖಂಡಿಸಿದ್ದಾರೆ.

ಹಿಂದೂ ಧರ್ಮ(Hindu Religion) ಒಂದು ಜೀವನ ವಿಧಾನವಾಗಿದೆ. ಪ್ರತಿಯೊಂದು ಧರ್ಮ ಮತ್ತು ನಂಬಿಕೆಯನ್ನು ಗೌರವಿಸಿಕೊಂಡು ಕಾಂಗ್ರೆಸ್ ರಾಷ್ಟ್ರವನ್ನು ನಿರ್ಮಿಸಿದೆ ಎಂದು ಟ್ವೀಟ್‌ ಮಾಡಿದ್ದಾರೆ. ಇದನ್ನೂ ಓದಿ: ‘ಹಿಂದೂ’ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಪದ – ಅರ್ಥ ಬಹಳ ಅಶ್ಲೀಲವಾಗಿದೆ: ಸತೀಶ್ ಜಾರಕಿಹೊಳಿ


ಸತೀಶ್ ಜಾರಕಿಹೊಳಿ ಅವರ ಹೇಳಿಕೆಯು ಅತ್ಯಂತ ದುರದೃಷ್ಟಕರ ಮತ್ತು ತಿರಸ್ಕಾರ ಅರ್ಹ. ಜಾರಕಿಹೊಳಿ ಅವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ ಎಂದ ಸುರ್ಜೇವಾಲ ತಿಳಿಸಿದ್ದಾರೆ.

Live Tv

Leave a Reply

Your email address will not be published. Required fields are marked *

Back to top button