ಬೆಂಗಳೂರು: ರಾಜ್ಯದಲ್ಲಿ ಶಾಲಾ ಪಠ್ಯಪುಸ್ತಕಗಳ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದೆ. ಪಠ್ಯ ಪರಿಷ್ಕರಣೆಯ ಬಗ್ಗೆ ಪರ-ವಿರೋಧಗಳು ಕೇಳಿ ಬರುತ್ತಿವೆ. ಈ ಕುರಿತಂತೆ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಬಿಜೆಪಿ ಸರ್ಕಾರವು ಶಿಕ್ಷಣ ಕ್ಷೇತ್ರದಲ್ಲಿ ರಾಜಕೀಯ ಮಾಡುತ್ತಿರುವುದನ್ನು ಖಂಡಿಸಿದ್ದಾರೆ.
Advertisement
ಟ್ವೀಟ್‍ನಲ್ಲಿ ಏನಿದೆ?
ದೇಶ ಹಾಗೂ ಉತ್ತಮ ಸಮಾಜದ ನಿರ್ಮಾಣಕ್ಕೆ ಶಿಕ್ಷಣ ಅಡಿಪಾಯ. ಆದರೆ ಪ್ರಸ್ತುತ ಬಿಜೆಪಿ ಸರ್ಕಾರವು ಶಿಕ್ಷಣ ಕ್ಷೇತ್ರದಲ್ಲೂ ರಾಜಕೀಯ ಮಾಡಲು ಹೊರಟಿದೆ. ನೈಜ ಇತಿಹಾಸವನ್ನು ತಿರುಚಿ, ಮುಂದಿನ ಪೀಳಿಗೆಗೆ ಹೊಸ ಇತಿಹಾಸವನ್ನು ನೀಡುವ ಕಾರ್ಯದಲ್ಲಿ ಮಗ್ನವಾಗಿದೆ. ಆರ್‌ಎಸ್‌ಎಸ್‌ನ ತತ್ವವನ್ನು ಮಕ್ಕಳ ತಲೆಗೆ ತುಂಬಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ. ಇದನ್ನೂ ಓದಿ: ಸೊಳ್ಳೆ ಉತ್ಪಾದನೆಗೆ ಕಾರಣವಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ – 50 ಸಾವಿರ ರೂ. ದಂಡ ವಿಧಿಸಿ: ಡೆಲ್ಲಿ ಹೈಕೋರ್ಟ್
Advertisement
ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲೂ ಬಿಜೆಪಿ ಎಲ್ಲರ ವಿರೋಧವನ್ನು ಎದುರಿಸುತ್ತಿದೆ. ಬಿಸಿಯೂಟ ಯೋಜನೆ ಹಳ್ಳ ಹಿಡಿದಿದೆ, ಶಾಲೆಗಳಲ್ಲಿ ಮೂಲ ಸೌಕರ್ಯವಿಲ್ಲ. ಇದರ ನಡುವೆ NEP ಹೆಸರಿನಲ್ಲಿ? ನಾಗ್ಪುರ ಶಿಕ್ಷಣ ನೀತಿ? ಜಾರಿಗೆ ತರುವ ಧಾವಂತಕ್ಕೆ ರಾಜ್ಯ ಸರ್ಕಾರ ಬಿದ್ದಿದೆ.
Advertisement
ದೇಶ ಹಾಗೂ ಉತ್ತಮ ಸಮಾಜದ ನಿರ್ಮಾಣಕ್ಕೆ ಶಿಕ್ಷಣ ಅಡಿಪಾಯ. ಆದರೆ ಪ್ರಸ್ತುತ BJP ಸರ್ಕಾರವು ಶಿಕ್ಷಣ ಕ್ಷೇತ್ರದಲ್ಲೂ ರಾಜಕೀಯ ಮಾಡಲು ಹೊರಟಿದೆ. ನೈಜ ಇತಿಹಾಸವನ್ನು ತಿರುಚಿ, ಮುಂದಿನ ಪೀಳಿಗೆಗೆ ಹೊಸ ಇತಿಹಾಸವನ್ನು ನೀಡುವ ಕಾರ್ಯದಲ್ಲಿ ಮಗ್ನವಾಗಿದೆ. RSS ತತ್ವವನ್ನು ಮಕ್ಕಳ ತಲೆಗೆ ತುಂಬಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ.
1/3
— DK Shivakumar (@DKShivakumar) May 27, 2022
Advertisement
ಶಿಕ್ಷಣ ಕ್ಷೇತ್ರವನ್ನು ಮತ್ತೆ ಸರಿಯಾದ ದಾರಿಗೆ ತರುವ ನಿಟ್ಟಿನಲ್ಲಿ ಶಿಕ್ಷಣ ತಜ್ಞರು, ಸಾಹಿತಿಗಳು, ಚಿಂತಕರು ಸೇರಿದಂತೆ ಸಂಬಂಧಪಟ್ಟ ಎಲ್ಲ ವರ್ಗದವರೂ ಧ್ವನಿಗೂಡಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ. ಶಿಕ್ಷಣವು ಮಕ್ಕಳ ಭವಿಷ್ಯಕ್ಕೆ ಒಂದು ಭದ್ರ ಅಡಿಪಾಯ. ಆ ಅಡಿಪಾಯವು ಎಂದಿಗೂ ಅಲುಗಾಡದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ. ಎಂದು ಕಳಕಳಿ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಿಮಾನದಲ್ಲಿ ಗುಟ್ಕಾ ಕಲೆ – ಸೂಪರ್‌ಸ್ಟಾರ್‌ಗಳ ಕಾಲೆಳೆದ ನೆಟ್ಟಿಗರು