ಮೈಸೂರಿಗೆ ಪೊಲೀಸ್‌ ಇನ್ಸ್‌ಪೆಕ್ಟರ್‌ ವಿವೇಕಾನಂದ ವರ್ಗಾವಣೆ – ಯತೀಂದ್ರ ಪ್ರಸ್ತಾಪಿಸಿದ್ದ ವಿವೇಕಾನಂದ ಇವರೇನಾ?

Public TV
2 Min Read
Yathindra Siddaramaiah

ಬೆಂಗಳೂರು/ಮೈಸೂರು: ರಾಜ್ಯಾದ್ಯಂತ ಪೊಲೀಸ್ ಇನ್ಸ್‌ಪೆಕ್ಟರ್‌ಗಳ (Police Inspector) ವರ್ಗಾವಣೆ ನಡೆದಿದ್ದು ಮೈಸೂರಲ್ಲೇ (Mysuru) ನಾಲ್ವರು ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಲಾಗಿದೆ. ಈ ವರ್ಗಾವಣೆಯ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ (Yathindra Siddaramaiah) ಅವರ ವಿಡಿಯೋ ಮತ್ತೆ ಸದ್ದು ಮಾಡಿದೆ.

ಈ ಹಿಂದೆ ರಾಜ್ಯ ಗುಪ್ತವಾರ್ತೆಗೆ ವರ್ಗಾವಣೆಗೊಂಡಿದ್ದ ವಿವೇಕಾನಂದ ಮೈಸೂರಿನ ವಿವಿ ಪುರಂ ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದಾರೆ. ರಾಜ್ಯದ್ಯಂತ ಸದ್ದು ಮಾಡಿದ್ದ ಯತೀಂದ್ರ ವಿಡಿಯೋದಲ್ಲಿ ವಿವೇಕಾನಂದ (Vivekananda) ಹೆಸರು ಪ್ರಸ್ತಾಪವಾಗಿತ್ತು. ವಿವೇಕಾನಂದನಾ? ಎಲ್ಲಿಗೆ? ಎಂದು ಯತೀಂದ್ರ ಪ್ರಶ್ನೆ ಮಾಡಿದ್ದರು.

olice inspector Vivekananda transferred to mysuru vv puram police station

ನಾನು ಕೊಟ್ಟಿದ್ದ 4-5 ಮಾತ್ರ ಮಾಡಿ ಎಂದು ಯತೀಂದ್ರ ಹೇಳಿದ್ದರು. ಈಗ ಮೈಸೂರಲ್ಲಿ ನಾಲ್ವರು ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ನಡೆದಿದ್ದು ಈ ನಾಲ್ವರಲ್ಲಿ ಒಬ್ಬರ ಹೆಸರು ವಿವೇಕಾನಂದ ಆಗಿರುವುದು ವಿಶೇಷ.  ಇದನ್ನೂ ಓದಿ: ವಿಪಕ್ಷ ನಾಯಕನ ಆಯ್ಕೆಯ ಹಿಂದಿನ ಬಿಜೆಪಿ ಹೈಕಮಾಂಡ್ ಲೆಕ್ಕಾಚಾರವೇನು?

ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಅವರು ಸಿಎಂ ಪುತ್ರ ಯತೀಂದ್ರ ವರ್ಗಾವಣೆ ದಂಧೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ (Siddaramaiah) ಜೊತೆ ನಡೆದಿದ್ದು ವರ್ಗಾವಣೆ ಪಟ್ಟಿಯ ಮಾತುಕತೆ ಎಂದು ಆರೋಪಿಸಿದ್ದರು. ಈ ಆರೋಪದ ಬೆನ್ನಲ್ಲೇ ಯತೀಂದ್ರ ಹೇಳಿದ್ದ ವಿವೇಕಾನಂದ ಇವರಾ ಎಂಬ ಗಂಭೀರ ಪ್ರಶ್ನೆ ಎದ್ದಿದೆ.

ಯತೀಂದ್ರ ಫೋನ್‌ ಕರೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಪುತ್ರ ಸಿಎಸ್‍ಆರ್ ಫಂಡ್ (ಕಾರ್ಪೋರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ ಫಂಡ್) ಬಗ್ಗೆ ಮಾತಾಡಿರುವುದು ಎಂದು ಸ್ಪಷ್ಟನೆ ನೀಡಿದ್ದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ನಾನು ರಾಜಕೀಯ ಜೀವನದಲ್ಲಿ ವರ್ಗಾವಣೆ ದಂಧೆ ಮಾಡಿಲ್ಲ. ವರ್ಗಾವಣೆ ದಂಧೆ ಮಾಡಿದ್ದೇನೆ ಎಂದು ಸಾಬೀತುಪಡಿಸಿದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ. ಐದು ಹೆಸರು ಎಂದರೆ ವರ್ಗ ಏನಯ್ಯ? ಅದು ಸಿಎಸ್‍ಆರ್ ಲಿಸ್ಟ್. ಶಾಲೆ ಕಟ್ಟಡಗಳನ್ನು ಸಿಎಸ್‍ಆರ್ ಫಂಡ್‍ನಿಂದ ರಿಪೇರಿ ಮಾಡಿಸಲಾಗುತ್ತಿದೆ. ಈ ಬಗ್ಗೆ ಯತೀಂದ್ರ ಅವರು ಹೇಳಿದ್ದಾರೆ. ಕುಮಾರಸ್ವಾಮಿ ರಾಜಕೀಯವಾಗಿ ಆರೋಪ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದರು.

 

ಬುಧವಾರ ಯತೀಂದ್ರ ಅವರು ವರುಣ ಕ್ಷೇತ್ರ ವ್ಯಾಪ್ತಿಯ ಮೈಸೂರು ತಾಲೂಕಿನ ಚಟ್ನಹಳ್ಳಿಪಾಳ್ಯ ಗ್ರಾಮದಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಸಭೆ ನಡೆಸಿ ಗ್ರಾಮದ ಜನರ ಅಹವಾಲು ಸ್ವೀಕರಿಸುತ್ತಿದ್ದರು. ಈ ವೇಳೆ ಅವರು ತಂದೆಗೆ ಕರೆ ಮಾಡಿದ್ದಾರೆ. ಯಾವುದೋ ವಿಷಯವನ್ನು ಪ್ರಸ್ತಾಪ ಮಾಡಿದ ಅವರು, ನಾನು ನೀಡಿದ ಲಿಸ್ಟ್‌ನದ್ದು ಮಾತ್ರ ಮಾಡಿ ಎಂದು ಸಾರ್ವಜನಿಕರ ಮುಂದೆಯೇ ನೀಡಿದ ಪಟ್ಟಿಯ ಬಗ್ಗೆ ಮಾತುಕತೆ ಮಾಡಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

Share This Article