ಬೆಂಗಳೂರು: ಕ್ಯಾನ್ಸರ್ ಟ್ರೀಟ್‌ಮೆಂಟ್‌ಗೆಂದು (Cancer Treatment) ಆಸ್ಪತ್ರೆಗೆ ಸೇರಿಸಿದ್ದ ಸಜಾ ಕೈದಿ (Convict) ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಿಂದ (Kidwai Cancer Hospital) ಎಸ್ಕೇಪ್ ಆಗಿದ್ದಾನೆ. ಕೈದಿ ಆಸ್ಪತ್ರೆಯಿಂದ ಪರಾರಿಯಾಗಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಚೇತನ್ ಕಲ್ಯಾಣಿ ಎಸ್ಕೇಪ್ ಆದ ಸಜಾ ಕೈದಿ. ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿಯ ಬೇಜವಾಬ್ದಾರಿಯಿಂದ ಅಪರಾಧಿ ಎಸ್ಕೇಪ್ ಆಗಿದ್ದಾನೆ ಎಂಬ ಮಾತುಗಳು ಕೇಳಿಬರುತ್ತಿದೆ. ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಸಜಾ ಕೈದಿಯನ್ನ ಬಿಜಾಪುರದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿತ್ತು. ಬಾಯಿ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಅಪರಾಧಿಯನ್ನ ಕಿದ್ವಾಯಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆ ತಂದಿದ್ದ ವೇಳೆ ಜೈಲು ಸಿಬ್ಬಂದಿ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ. ಆಸ್ಪತ್ರೆ ಸಿಬ್ಬಂದಿ ಹಿಡಿಯಲು ಪ್ರಯತ್ನಿಸಿದರೂ ಸಿಗದೇ ಎಸ್ಕೇಪ್ ಆಗಿದ್ದಾನೆ. ಇದನ್ನೂ ಓದಿ: ಭದ್ರಾವತಿ ಈದ್ ಮೆರವಣಿಗೆಯಲ್ಲಿ ಪಾಕ್ ಪರ ಘೋಷಣೆ
ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಪ್ಪನ ಅಗ್ರಹಾರ ಸಿಬ್ಬಂದಿ ರಘು ಕೊಟ್ಟ ದೂರಿನ ಮೇರೆಗೆ ಬಿಎನ್‌ಎಸ್ 262ರ ಅಡಿ ಪ್ರಕರಣ ದಾಖಲಾಗಿದೆ. ಕಳೆದ ಆಗಸ್ಟ್ 3ರಂದು ವಿಜಯಪುರ ಜೈಲಿನಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿತ್ತು. ಬಾಯಿಯ ಕ್ಯಾನ್ಸರ್ ಇದ್ದ ಕಾರಣ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಆಗಿದ್ದ ನಂತರ ಕಾರಾಗೃಹ ವೈದ್ಯರ ಸಲಹೆ ಮೇರೆಗೆ ಕಿದ್ವಾಯಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಆಗಸ್ಟ್ 21ರಿಂದ ಕಿದ್ವಾಯಿ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಜಾ ಕೈದಿ ಚೈತನ್ಯ ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಿಬ್ಬಂದಿ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ. ಇದನ್ನೂ ಓದಿ: ಡಿಜಿಟಲ್ ಅರೆಸ್ಟ್ – 30 ಲಕ್ಷ ರೂ. ಕಳೆದುಕೊಂಡ ಮಾಜಿ ಶಾಸಕ
ಬಾಯಿ ಕ್ಯಾನ್ಸರ್ ಇದ್ದ ಕಾರಣ ಮಾತನಾಡಲು ಸಹ ಚೈತನ್ಯಗೆ ಆಗುತ್ತಿರಲಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡು ಕೈದಿಗಾಗಿ ಸಿದ್ದಾಪುರ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಪ್ರತಿಭಟನೆಯ ಬೆನ್ನಲ್ಲೇ ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ವಾಪಸ್

