LatestMain PostNational

ದಲಿತ ಬಾಲಕಿಯರು ಬಡಿಸಿದ ಊಟವನ್ನು ಬಿಸಾಡಿ ಎಂದ ಅಡುಗೆಯವ – ಬಂಧನ

ಜೈಪುರ: ರಾಜಸ್ಥಾನದ ಉದಯಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಇಬ್ಬರು ದಲಿತ ಬಾಲಕಿಯರಿಗೆ ತಾರತಮ್ಯ ಮಾಡಿದ ಆರೋಪದ ಮೇಲೆ ಅಡುಗೆಯವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ಬರೋಡಿ ಪ್ರದೇಶದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಾಲ್ ರಾಮ್ ಗುರ್ಜರ್ ಎಂಬಾತ ತಯಾರಿಸಿದ ಮಧ್ಯಾಹ್ನದ ಊಟವನ್ನು ದಲಿತ ಬಾಲಕಿಯರು ಬಡಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಲಾಲ್ ರಾಮ್, ದಲಿತ ಬಾಲಕಿಯರು ಬಡಿಸಿದ ಊಟವನ್ನು ಎಸೆಯುವಂತೆ ಇತರ ವಿದ್ಯಾರ್ಥಿಗಳಿಗೆ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಅಡುಗೆಯವನ ಸೂಚನೆಯನ್ನು ಅನುಸರಿಸಿ ಊಟವನ್ನು ಎಸೆದಿದ್ದಾರೆ. ಈ ಘಟನೆಯ ಬಗ್ಗೆ ಬಾಲಕಿಯರು ತಮ್ಮ ಕುಟುಂಬದ ಸದಸ್ಯರಿಗೆ ತಿಳಿಸಿದ್ದು, ಬಳಿಕ ಅವರು ತಮ್ಮ ಕೆಲವು ಸಂಬಂಧಿಕರೊಂದಿಗೆ ಶಾಲೆಗೆ ಆಗಮಿಸಿ, ಅಡುಗೆಯವನ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ – ಕನ್ನಡದಲ್ಲೇ ಟ್ವೀಟ್ ಮಾಡಿದ ಮೋದಿ

ಅಡುಗೆಯವನ ವಿರುದ್ಧ ಗೋಗುಂದ ಪೊಲೀಸ್ ಠಾಣೆಯಲ್ಲಿ ಎಸ್‌ಸಿ ಮತ್ತು ಎಸ್‌ಟಿ(ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ವಿಷಯ ನಿಜವೆಂದು ಕಂಡುಬಂದಿದ್ದರಿಂದ ತ್ವರಿತ ಕ್ರಮ ತೆಗೆದುಕೊಳ್ಳಲಾಗಿದೆ. ದಲಿತ ಬಾಲಕಿಯರು ಊಟವನ್ನು ಬಡಿಸಿದ್ದಕ್ಕೆ ಇತರ ವಿದ್ಯಾರ್ಥಿನಿಯರಿಗೆ ಅದನ್ನು ಎಸೆಯಲು ಹೇಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಡುಗೆಯವನು ಯಾವಾಗಲೂ ತಾನೇ ಆಯ್ಕೆ ಮಾಡಿ, ಮೇಲ್ವರ್ಗದ ವಿದ್ಯಾರ್ಥಿಗಳಿಂದ ಊಟವನ್ನು ಬಡಿಸುತ್ತಿದ್ದರು. ಆದರೆ ನಿನ್ನೆ ವಿದ್ಯಾರ್ಥಿಗಳು ಸರಿಯಾಗಿ ಬಡಿಸುತ್ತಿಲ್ಲ ಎಂಬ ಕಾರಣಕ್ಕೆ ದಲಿತ ಬಾಲಕಿಯರಿಗೆ ಊಟ ಬಡಿಸುವಂತೆ ಶಿಕ್ಷಕರೊಬ್ಬರು ಸೂಚನೆ ನೀಡಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಪ್ರಕರಣ – ಮುರುಘಾ ಶ್ರೀಗೆ ಸೋಮವಾರದವರೆಗಿಲ್ಲ ಜಾಮೀನು

Live Tv

Leave a Reply

Your email address will not be published. Required fields are marked *

Back to top button