ನವದೆಹಲಿ: ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 50ರೂ. ಹೆಚ್ಚಳ ಮಾಡಲಾಗಿದೆ. ಕಳೆದ ಎರಡು ತಿಂಗಳಲ್ಲಿ ಎರಡನೇ ಬಾರಿಗೆ ಗ್ಯಾಸ್ ಸಿಲಿಂಡರ್ ದರ ಏರಿಕೆಯಾಗಿದೆ.
ಈ ಹಿಂದೆ ಮಾರ್ಚ್ 22ರಂದು ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆಯು 50ರೂ. ಹೆಚ್ಚಳವಾಗಿತ್ತು. ಏಪ್ರಿಲ್‍ನಲ್ಲಿ ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿರಲಿಲ್ಲ. ಆದರೆ ಇದೀಗ ನವದೆಹಲಿಯಲ್ಲಿ 949.50ರೂ. ಇದ್ದ 14.2 ಕೆ.ಜಿ ತೂಕದ ಅಡುಗೆ ಅನಿಲ ಸಿಲಿಂಡರ್ ಬೆಲೆ 999.50ರೂ. ಆಗಿದೆ. ಇದನ್ನೂ ಓದಿ: ಪಡಿತರ ಅಕ್ಕಿ ಅಕ್ರಮ ಸಾಗಾಟ – ಲಕ್ಷಾಂತರ ಮೌಲ್ಯದ ಅಕ್ಕಿ ಜಪ್ತಿ
Advertisement
Advertisement
ಈ ತಿಂಗಳ ಆರಂಭದಲ್ಲಿ ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಲಾಗಿತ್ತು. ಮೇ 1 ರಂದು, ವಾಣಿಜ್ಯ ಬಳಕೆಯ 19 ಕೆಜಿ ಎಲ್‍ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ 102.50ರೂ.ಗೆ ಹೆಚ್ಚಳ ಮಾಡುವ ಮೂಲಕ 2,355.50ರೂ.ಗೆ ಏರಿಸಲಾಗಿತ್ತು. ಅಲ್ಲದೆ, 5 ಕೆ.ಜಿ ಸಿಲಿಂಡರ್‌ನ ಬೆಲೆಯನ್ನು 655ರೂ.ಗೆ ಏರಿಸಲಾಗಿತ್ತು. ಇದನ್ನೂ ಓದಿ: ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ ಇನ್ನಿಲ್ಲ
Advertisement
The price of 14.2 kg Domestic LPG cylinder increased by Rs 50 with effect from today. The domestic cylinder will cost Rs 999.50/cylinder from today.
— ANI (@ANI) May 7, 2022
Advertisement
ಏಪ್ರಿಲ್ 1 ರಂದು, 19 ಕೆ.ಜಿ ವಾಣಿಜ್ಯ ಬಳಕೆಯ ಎಲ್‍ಪಿಜಿ ಪ್ರತಿ ಸಿಲಿಂಡರ್ ಬೆಲೆಯಲ್ಲಿ 250ರೂ. ಏರಿಕೆ ಮಾಡಲಾಗಿತ್ತು. ಮಾರ್ಚ್ 1 ರಂದು ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆಯಲ್ಲಿ 105ರೂ. ರಷ್ಟು ಹೆಚ್ಚಳವಾಗಿತ್ತು.