ನವದೆಹಲಿ: ಅಡುಗೆ ಎಣ್ಣೆ ಬೆಲೆ ಏರಿಕೆಯಿಂದ ತೊಂದರೆ ಅನುಭವಿಸುತ್ತಿದ್ದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅಡುಗೆ ಎಣ್ಣೆ ಬೆಲೆಯಲ್ಲಿ ಇಳಿಕೆಯಾಗಿದೆ.
ಪ್ರತಿ ಲೀಟರ್ ಅಡುಗೆ ಎಣ್ಣೆ ಬೆಲೆಯಲ್ಲಿ 15 ರೂಪಾಯಿ ಇಳಿಕೆ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶ ಹೊರಡಿಸಿದೆ. ಇದನ್ನೂ ಓದಿ: ಹನುಮಾನ್ ಚಾಲೀಸಾ ಪಠಿಸಿದ ವಿದ್ಯಾರ್ಥಿಗಳಿಗೆ ದಂಡ – ಗೃಹ ಸಚಿವ ಕಿಡಿ
Advertisement
Advertisement
ಬೆಲೆ ಇಳಿಕೆಗೆ ಈ ಹಿಂದೆಯೇ ಕೇಂದ್ರ ಸರ್ಕಾರ ಸೂಚಿಸಿತ್ತು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ಬೆಲೆ ಇಳಿಕೆ ಹಿನ್ನೆಲೆ ದೇಶದಲ್ಲೂ ಬೆಲೆ ಇಳಿಕೆ ಮಾಡುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿತ್ತು. ಇದಕ್ಕೆ ಕಂಪನಿಗಳು ಒಪ್ಪಿಗೆ ಸೂಚಿಸಿರುವ ಕಾರಣ ಬೆಲೆ ಇಳಿಕೆ ಮಾಡಲಾಗಿದೆ.
Advertisement
Advertisement
ಆಮದು ಮಾಡಿಕೊಳ್ಳುವ ಖಾದ್ಯ ತೈಲಗಳ ಅಂತಾರಾಷ್ಟ್ರೀಯ ಬೆಲೆಯಲ್ಲಿ ಇಳಿಕೆಯಾಗಿದೆ. ಆದ್ದರಿಂದ ಖಾದ್ಯ ತೈಲ ಉದ್ಯಮವು ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಯಾಗಿದೆ. ಇದನ್ನೂ ಓದಿ: ಭಯ ಬೇಡ, ಲಾಲೂ ಪ್ರಸಾದ್ ಚೇತರಿಸಿಕೊಳ್ಳುತ್ತಿದ್ದಾರೆ: ಪುತ್ರಿ ಮಿಸಾ ಭಾರ್ತಿ