ಮಂಡ್ಯ: 2019ರ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಸುಮಲತಾ ಗೆದ್ದು ಸಂಸದರಾದರೂ ಕೂಡ ಜೆಡಿಎಸ್‌ನವರು ಸಂಸದೆ ಸುಮಲತಾ (Sumalatha Ambareesh) ಅವರಿಗೆ ಯಾವುದೇ ಸಹಕಾರ ನೀಡದೆ ಪ್ರತಿ ಹಂತದಲ್ಲೂ ಸುಮಲತಾ ವರ್ಸಸ್ ದಳಪತಿಗಳ ನಡುವೆ ವಾಕ್ಸಮರ ನಡೆಯುತ್ತಿತ್ತು. ಸದ್ಯ ಮಂಡ್ಯ (Mandya) ರಾಜಕೀಯ ಪಲ್ಲಟಕ್ಕೆ ಸಾಕ್ಷಿಯಾಗಿದ್ದು, ನಿತ್ಯವೂ ಕ್ಷೇತ್ರದಲ್ಲಿ ಬದಲಾವಣೆಯ ಗಾಳಿ ಬೀಸತೊಡಗಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಇಡೀ ಇಂಡಿಯಾವೇ ಮಂಡ್ಯದತ್ತ ತಿರುಗಿ ನೋಡುವಂತೆ ಮಾಡಿತ್ತು. ಕಾರಣ, ಅಂದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ಕ್ಷೇತ್ರದಲ್ಲಿ ಸ್ವಾಭಿಮಾನದ ಕಹಳೆ ಮೊಳಗಿಸಿದ್ದರು. ಅಂದಿನ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವೇ ಮಂಡ್ಯದಲ್ಲಿ ಬೀಡುಬಿಟ್ಟರೂ ಸ್ವಾಭಿಮಾನದ ಅಲೆಯಲ್ಲಿ ಈಜಿ ದಡ ಸೇರಲು ಸಾಧ್ಯವಾಗಲಿಲ್ಲ. ಸ್ವಾಭಿಮಾನದ ಸೆರಗೊಡ್ಡಿ ಮತ ಭಿಕ್ಷೆ ಬೇಡಿದ ಪರಿಣಾಮ ಸುಮಲತಾ ಅಂಬರೀಶ್ ಗೆದ್ದು, ಅಂದಿನ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೀನಾಯವಾಗಿ ಸೋಲಬೇಕಾಯಿತು. ಇದನ್ನೂ ಓದಿ: Taiwan Earthquake – 7.4 ತೀವ್ರತೆಯ ಪ್ರಬಲ ಭೂಕಂಪ – ಸುನಾಮಿ ಎಚ್ಚರಿಕೆ
Advertisement
Advertisement
ಅತ್ತ ಸುಮಲತಾ ಅಂಬರೀಶ್ ಸಂಸದರಾದ ನಂತರ ಬಿಜೆಪಿ ಪಕ್ಷಕ್ಕೆ ಬಾಹ್ಯ ಬೆಂಬಲ ಘೋಷಿಸಿದರು. ಇತ್ತ ಕಳೆದ ವಿಧಾನಸಭೆ ಚುನಾವಣೆ ಸೋಲಿನ ನಂತರ ಬಿಜೆಪಿ ಜೊತೆ ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಂಡಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ (JDS) ಪಕ್ಷಕ್ಕೆ ಬಿಟ್ಟುಕೊಡಲಾಗಿದೆ. ಇದು ಸಂಸದೆ ಸುಮಲತಾಗೆ ತೀವ್ರ ನಿರಾಸೆ ಉಂಟು ಮಾಡಿದೆ. ಮಂಡ್ಯ ಬಿಜೆಪಿ ಟಿಕೆಟ್‌ಗಾಗಿ ಕಸರತ್ತು ನಡೆಸಿದ್ದ ಸುಮಲತಾಗೆ ಟಿಕೆಟ್ ಕೈತಪ್ಪಿದೆ. ಸಾಲದೆಂಬಂತೆ ತನ್ನ ರಾಜಕೀಯ ಎದುರಾಳಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬೆಂಬಲಿಸಬೇಕಾ? ತಟಸ್ಥವಾಗಿ ಉಳಿಯಬೇಕಾ? ಅಥವಾ ಕಳೆದ ಬಾರಿಯಂತೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕಾ ಎಂಬ ಗೊಂದಲ ಸುಮಲತಾ ಹಾಗೂ ಆಪ್ತರದ್ದಾಗಿದೆ. ಇದರ ನಡುವೆಯೇ ಇಂದು ಮಂಡ್ಯದಲ್ಲಿ ಮಹತ್ವದ ಸಭೆ ಕರೆದಿರೋ ಸುಮಲತಾ, ಇಂದು ಮಂಡ್ಯದಲ್ಲೇ ತಮ್ಮ ಮುಂದಿನ ನಿರ್ಧಾರ ಪ್ರಕಟಿಸಲಿದ್ದಾರೆ. ಇದನ್ನೂ ಓದಿ: ಸೋನು ಗೌಡ ಕೇಸ್ – ಬಾಲಕಿ ಪೋಷಕರಿಗೆ ಕೌನ್ಸಿಲಿಂಗ್‌ಗೆ ಮುಂದಾದ ರಕ್ಷಣಾ ಆಯೋಗ
Advertisement
ಇಂದು ಬೆಳಗ್ಗೆ 10.30ಕ್ಕೆ ಮಂಡ್ಯದ ಕಾಳಿಕಾಂಬ ದೇಗುಲದ ಬಳಿ ಸುಮಲತಾ ಬೆಂಬಲಿಗರ ಸಭೆ ಕರೆಯಲಾಗಿದೆ. ಈ ಸಂಬಂಧ ತನ್ನ ಸೋಷಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ ಹಾಕಿರೋ ಸುಮಲತಾ ಇಂದಿನ ಸಭೆಗೆ ಬೆಂಬಲಿಗರನ್ನು ವಿಶೇಷವಾಗಿಯೇ ಆಹ್ವಾನಿಸಿದ್ದಾರೆ. ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೆ, ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ ಕ್ಷೇತ್ರದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ. ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಈಗಾಗಲೇ ಆ ಕುರಿತಂತೆ ಗಂಭೀರ ಚಿಂತನೆ ಕೂಡ ಮಾಡಲಾಗಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತಿಲ್ಲ. ಮಂಡ್ಯಕ್ಕಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ. ನಿಮ್ಮ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ನಿಮ್ಮ ಸಮಯವನ್ನು ನನಗೆ ಕೊಟ್ಟು ಮನೆವರೆಗೂ ಬಂದಿದ್ದೀರಿ. ಕೆಲವರು ತಾವು ಇದ್ದಲ್ಲೇ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೀರಿ. ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ದೊಡ್ಡದು. ಯಾವತ್ತೂ ಅದು ಹಾಗೆಯೇ ಇರಲಿ ಎಂದು ಆಶಿಸುವೆ. ಇಂದು ಬೆಳಿಗ್ಗೆ 10 ಗಂಟೆಗೆ ಕಾಳಿಕಾಂಬ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲೇ ನನ್ನ ಮತ್ತು ನಿಮ್ಮೆಲ್ಲರ ನಿಲುವನ್ನು ಸ್ಪಷ್ಟಪಡಿಸುವ ಹಾಗೂ ಮಂಡ್ಯ ಲೋಕಸಭಾ ಚುನಾವಣೆ ಕುರಿತಂತೆ ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಪ್ರಕಟಿಸುತ್ತಿದ್ದೇನೆ. ನಮ್ಮೊಂದಿಗೆ ನಮ್ಮೆಲ್ಲರ ಪ್ರೀತಿಯ ದರ್ಶನ್, ಅಭಿಷೇಕ್ ಅಂಬರೀಶ್ ಇರಲಿದ್ದಾರೆ. ತಮ್ಮ ಸಲಹೆ ಮತ್ತು ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಬನ್ನಿ, ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ಧಿಪಡಿಸೋಣ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಪಾರಿವಾಳಗಳನ್ನೇ ಬೇಹುಗಾರಿಕೆಗೆ ಬಳಸೋದ್ಯಾಕೆ?
Advertisement
ಸುಮಲತಾರ ಈ ಒಂದು ಪೋಸ್ಟ್ ಅವರ ನಡೆ ಏನು ಎಂಬ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ. ಇತ್ತೀಚಿಗಷ್ಟೇ ರಾಜಕೀಯ ವೈರತ್ವ ಮರೆತು ಸುಮಲತಾ ಮನೆಗೆ ಭೇಟಿ ನೀಡಿದ್ದ ಹೆಚ್‌ಡಿ ಕುಮಾರಸ್ವಾಮಿ ತಮ್ಮನ್ನು ಬೆಂಬಲಿಸುವಂತೆ ಕೋರಿದ್ದರು. ಹಳೆಯದನ್ನು ಮರೆತು ಬಿಜೆಪಿ-ಜೆಡಿಎಸ್ ಮೈತ್ರಿ ಧರ್ಮ ಪಾಲನೆ ಮಾಡ್ತಾರಾ? ತಟಸ್ಥರಾಗಿದ್ದು ಜೆಡಿಎಸ್ ವಿರುದ್ಧ ಹಗೆ ಸಾಧಿಸುತ್ತಾರಾ? ಅಥವಾ ಕಳೆದ ಬಾರಿಯಂತೆ ಪಕ್ಷೇತರ ಅಭ್ಯರ್ಥಿಯಾಗಿ ಸ್ವಾಭಿಮಾನದ ಕಹಳೆ ಮೊಳಗಿಸುತ್ತಾರಾ ಎಂಬುದನ್ನು ಕಾದುನೋಡಬೇಕಿದೆ. ಇದನ್ನೂ ಓದಿ: ಬಿಟ್ ಕಾಯಿನ್ ಹಗರಣದ ಆರೋಪಿ ಶ್ರೀಕಿಗೆ ಗನ್‌ಮ್ಯಾನ್!