ಬೆಂಗಳೂರು: ಡಾ.ರಾಜ್‍ಕುಮಾರ್ ವಾರ್ಡ್‍ನ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಭೂಗತ ಕೇಬಲ್ ಆಗಿ ಬದಲಾವಣೆಗೊಂಡಿರುವ ಕೆಪಿಟಿಸಿಎಲ್ ಹೈಟೆನ್ಷನ್ ಲೈನ್‍ನನ್ನು ತೆರವುಗೊಳಿಸುವ ಕಾಮಗಾರಿ ಪೂಜೆಯನ್ನು ದೀಪ ಬೆಳಗಿಸಿ ವಸತಿ ಸಚಿವರಾದ ವಿ.ಸೋಮಣ್ಣ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಸೋಮಣ್ಣ ಅವರು, ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಅಧಿಕಾರಿಗಳ ಮತ್ತು ಜನರ ಸಹಕಾರ ಮುಖ್ಯ. ಶ್ರೀ ಶಿವಕುಮಾರ ಸ್ವಾಮೀಜಿ, ಬಾಲಗಂಗಾಧರ ಸ್ವಾಮೀಜಿ ಅವರ ಆಶೀರ್ವಾದದಿಂದ ಅಭಿವೃದ್ದಿ ಕೆಲಸ ಮಾಡಲಾಗುತ್ತಿದೆ ಎಂದು ವಿವರಿಸಿದರು. ಇದನ್ನೂ ಓದಿ: ಬೊಮ್ಮಾಯಿ ಹೇಳಿದ್ದೆ ವೇದ ವಾಕ್ಯನಾ? ಬೊಮ್ಮಾಯಿಗಿಂತ ಹಿರಿಯ ನಾನು: ಸಿದ್ದರಾಮಯ್ಯ
ಜನರ ಸಹಕಾರದಿಂದ 3 ವರ್ಷದಲ್ಲಿ ನೂರಾರು ಅಭಿವೃದ್ಧಿ ಕೆಲಸಗಳು ನಡೆದಿದೆ. 7 ಎಕರೆ ಬಾಳಯ್ಯನ ಕೆರೆ ಭೂಕಬಳಿಕೆದಾರರಿಂದ ಬಿಡಿಸಿ, ಬಾಲಗಂಗಾಧರನಾಥ ಸ್ವಾಮೀಜಿ ಆಶೀರ್ವಾದದಿಂದ ಉಳಿಸಲಾಯಿತು. 2 ಕೋಟಿ ರೂ. ವೆಚ್ಚದಲ್ಲಿ ಎಸ್‍ಟಿಪಿ ಪ್ಲಾಂಟ್ ನಿರ್ಮಾಣ ಮತ್ತು 57 ದೇವಾಲಯಗಳ ನವೀಕರಣ, ಜೀರ್ಣೋದ್ಧಾರ ಮತ್ತು ಖಾಸಗಿ ಶಾಲೆಗೆ ಪೈಪೋಟಿ ನೀಡುವಂತೆ ಮಾನಸನಗರದಲ್ಲಿ 2,000 ಸಾವಿರ ಮಕ್ಕಳ ಪ್ರವೇಶಾವಕಾಶ ಇರುವ ಶಾಲೆ ಆರಂಭವಾಗಲಿದೆ ಎಂದು ತಿಳಿಸಿದರು.
45 ಉದ್ಯಾನವನ, 24 ಬ್ಯಾಡ್ಮಿಂಟನ್ ಕೋರ್ಟ್‍ಗಳು ಪ್ರತಿ ವಾರ್ಡ್‍ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 12 ಕೋಟಿ ರೂ. ವೆಚ್ಚದಲ್ಲಿ ಕನಕಭವನ ನಿರ್ಮಾಣ, 250 ವಿದ್ಯಾರ್ಥಿಗಳ ಉಳಿದುಕೊಳ್ಳುವ ಪಿಜಿ ಸೆಂಟರ್ ಹಾಗೂ ಐಎಎಸ್ ಮತ್ತು IRS ತರಬೇತಿ ಕೇಂದ್ರ, ಉಚಿತ ಡಯಾಲಿಸಿಸ್ ಕೇಂದ್ರ, ದಾಸರಹಳ್ಳಿ ವಾರ್ಡ್‍ನಲ್ಲಿ 200 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಪಂತರಪಾಳ್ಯದಲ್ಲಿ ಹೈಟೆಕ್ ಆಸ್ಪತ್ರೆ ಮತ್ತು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರು, ಒಳಚರಂಡಿ ರಸ್ತೆಗಳು ಸುವ್ಯವಸ್ಥಿತವಾದ ಮಾದರಿ ವಿಧಾನಸಭಾ ಕ್ಷೇತ್ರವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಹಿಜಬ್-ಕೇಸರಿ ವಿವಾದ ಬೆನ್ನಲ್ಲೇ ಶುರುವಾಯ್ತು ಸಿಂಧೂರ ಚಳುವಳಿ
ಬಿಬಿಎಂಪಿ ವಿಶೇಷ ಆಯುಕ್ತರಾದ ದೀಪಕ್ ಅಧಿಕಾರಿಗಳು ಮತ್ತು ಜಂಟಿ ಆಯುಕ್ತರಾದ ಶ್ರೀನಿವಾಸ್, ಕೆಪಿಟಿಸಿಎಲ್ ಮುಖ್ಯ ಅಭಿಯಂತರಾದ ಜಯಕುಮಾರ್, ಗೋವಿಂದರಾಜನಗರ ಮಂಡಲ ಬಿಜೆಪಿ ಅಧ್ಯಕ್ಷರಾದ ವಿಶ್ವನಾಥಗೌಡ, ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳಾದ ರೂಪಲಿಂಗೇಶ್ವರ್, ಗಂಗಭೈರಯ್ಯ, ಕೆ.ಉಮೇಶ್ ಶೆಟ್ಟಿ, ಮೋಹನ್ ಕುಮಾರ್, ವಾಗೇಶ್, ಶಿಲ್ಪ ಶ್ರೀಧರ್, ಪಲ್ಲವಿ, ಬಿಜೆಪಿ ಮುಖಂಡರಾದ ರಾಜಪ್ಪ, ಹೆಚ್.ರಮೇಶ್ ಅವರು ಪಾಲ್ಗೊಂಡಿದ್ದರು.