ಮುಂಬೈ: ರಕ್ಷಣೆ ಕೊಡಬೇಕಾದ ಸಬ್ ಇನ್ಸ್ ಪೆಕ್ಟರ್ ಮಹಿಳಾ ಪೇದೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಗರದಲ್ಲಿ ನಡೆದಿದೆ.
ಆರೋಪಿಯನ್ನು ಎಸ್‍ಐ ಅಮಿತ್ ಶೇಲರ್ ಎಂದು ಗುರುತಿಸಲಾಗಿದೆ. ಕಳೆದ ಮಾರ್ಚ್‍ನಲ್ಲಿ ಎಸ್‍ಐ ನನಗೆ ಮತ್ತು ಬರುವ ತಂಪು ಪಾನೀಯ ಕುಡಿಸಿ ಬಳಿಕ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಮುಂಬೈನ ಕ್ರೈಂ ಬ್ರಾಂಚ್‍ನಲ್ಲಿ ದೂರು ನೀಡಿದ್ದಾರೆ.
ಎಸ್‍ಐ ಅತ್ಯಾಚಾರ ಎಸಗಿದ್ದಲ್ಲದೇ ಆ ದೃಶ್ಯಾವಳಿಯನ್ನು ತನ್ನ ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ. ಅಷ್ಟೇ ಅಲ್ಲದೇ ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾನೆ ಎಂದು ಸಂತ್ರಸ್ತೆ ತಿಳಿಸಿದ್ದಾರೆ.
ಸಿಬಿಡಿ, ಪನ್ವೇಲ್, ಕಾಮೋತೆ ಮತ್ತು ಖರರ್ಗರ್ ಮುಂತಾದ ಸ್ಥಳಗಳಲ್ಲಿ ಅನೇಕ ಬಾರಿ ಬೆದರಿಕೆ ಒಡ್ಡಿ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಸದ್ಯಕ್ಕೆ ಪೇದೆ ನೀಡಿದ ದೂರಿನ ಆಧಾರದ ಮೇರೆಗೆ ಶೇಲರ್ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಇನ್ನೂ ಆರೋಪಿಯನ್ನು ಬಂಧಿಸಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
2010ರಲ್ಲಿ ಆರೋಪಿ ಶೇಲರ್ ಹಾಗೂ ಪೇದೆ ಒಂದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಂದಿನಿಂದಲೂ ಪರಿಚಯಸ್ಥರು ಎಂದು ಮೂಲಗಳು ತಿಳಿಸಿವೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews