ಶ್ರೀನಗರ: ದೇವಸ್ಥಾನದ ಬಳಗೆ ಪ್ರವೇಶಿಸುತ್ತಿದ್ದ ಪೊಲೀಸ್ ಕಾನ್‍ಸ್ಟೇಬಲ್ ರಾಷ್ಟ್ರ ವಿರೋಧಿ ಎಂದು ಶಂಕಿಸಿ ಗುಂಡಿನ ದಾಳಿ ನಡೆಸಿದ ಘಟನೆ ಕಾಶ್ಮೀರದಲ್ಲಿ ನಡೆದಿದೆ.
ಲಂಗೇಟ್ ಹಂದ್ವಾರ ನಿವಾಸಿ ಅಜಯ್ ಧರ್ ಗುಂಡಿನ ದಾಳಿಗೆ ಒಳಗಾದ ಕಾನ್‍ಸ್ಟೇಬಲ್. ಕಾಶ್ಮೀರದ ಬಹುತೇಕ ದೇವಸ್ಥಾನಗಳಿಗೆ ಪೊಲೀಸ್ ಭದ್ರತೆ ನೀಡಲಾಗಿದೆ. ಈ ಹಿನ್ನೆಲೆ ಅಜಯ್ ಅವರು ತಮ್ಮ ಗುರುತನ್ನು ಮುಚ್ಚಿಟ್ಟು ದೇವಾಲಯದ ಬಾಗಿಲನ್ನು ಒಡೆಯುತ್ತಿದ್ದರು. ಇದನ್ನೂ ಓದಿ: ಉಡುಪಿಯಲ್ಲಿ ಹಟ್ಟಿಗೆ ನುಗ್ಗಿ ಗೋವು ಕಳ್ಳತನ- ಪೊಲೀಸ್ ಠಾಣೆ ಮುಂದೆ ಪ್ರತಿಭಟನಾ ಭಜನೆ
ಗಾಳಿಯಲ್ಲಿ ಗುಂಡು ಹಾರಿಸಿದ ನಂತರವೂ ತನ್ನ ಗುರುತನ್ನು ಬಹಿರಂಗ ಪಡಿಸದ ಕಾರಣ ಅಜಯ್ ಉಗ್ರಗಾಮಿ ಆಗಿರಬಹುದು ಎಂದು ಶಂಕಿಸಿ ಅವರ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಪರಿಣಾಮ ಅಜಯ್ ಸಾವನ್ನಪ್ಪಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಇನ್ಸ್‍ಪೆಕ್ಟರ್ ಜನರಲ್ ಆಫ್ ಪೊಲೀಸ್ ವಿಜಯ್ ಕುಮಾರ್, ಈ ಘಟನೆ ದುರದೃಷ್ಟಕರ. ಅಜಯ್ ತಮ್ಮ ಗುರುತನ್ನು ತಿಳಿಸದೇ ಇರುವುದೇ ಈ ದುರಂತಕ್ಕೆ ಕಾರಣ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗ್ರಿಲ್ ಹಾಕಿದ್ದರಿಂದಲೇ ಇಬ್ಬರು ಬೆಂಕಿಗೆ ಬಲಿಯಾಗಿದ್ದಾರೆ – ಅಪಾರ್ಟ್‍ಮೆಂಟ್ ನಿವಾಸಿ
ಅಫ್ಘಾನಿಸ್ಥಾನದಲ್ಲಿ ತಾಲಿಬಾನ್ ಸರ್ಕಾರ ರಚನೆಯಾದ ಬಳಿಕ ಪಾಕಿಸ್ತಾನದ ಐಎಸ್‍ಐ ಭಾರತಕ್ಕೆ ಉಗ್ರರನ್ನು ಕಳುಹಿಸಲು ಮುಂದಾಗಿದೆ. ಕೆಲ ಉಗ್ರರು ಕಾಶ್ಮೀರವನ್ನು ಪ್ರವೇಶಿಸಿದ್ದಾರೆ ಎಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.