ಶ್ರೀನಗರ: ಉಗ್ರರು ಎಸೆದ ಗ್ರೆನೇಡ್‍ನಿಂದ ಪೊಲೀಸ್ ಕಾನ್ಸ್‌ಟೆಬಲ್‍ರೊಬ್ಬರು ಹುತಾತ್ಮರಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಖೈಮೋಹ್ ಪ್ರದೇಶದಲ್ಲಿ ನಡೆದಿದೆ.
ಪೂಂಚ್ ನಿವಾಸಿ ತಾಹಿರ್ ಖಾನ್ ಮೃತಪ ಪೊಲೀಸ್ ಸಿಬ್ಬಂದಿ. ಖೈಮೊಹ್ ಕುಲ್ಗಾಂನಲ್ಲಿ ನಡೆದ ಗ್ರೆನೇಡ್ ದಾಳಿಯಲ್ಲಿ ತಾಹಿರ್ ಖಾನ್ ಗಂಭೀರವಾಗಿ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಜಿಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿದ್ದಾರೆ.
A grenade incident was reported yesterday night in Qaimoh #Kulgam. In this #terror incident, 01 police personnel namely Tahir Khan R/O Mendhar, Poonch got injured. He was shifted to GMC hospital #Anantnag for treatment where he succumbed & attained #martyrdom.@JmuKmrPolice
— Kashmir Zone Police (@KashmirPolice) August 14, 2022
ಇನ್ನೂ ನಿನ್ನೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಈದ್ಗಾ ಪ್ರದೇಶದಲ್ಲಿ ಉಗ್ರರು ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ಎಸೆದಿದ್ದರಿಂದ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿ ಗಾಯಗೊಂಡಿದ್ದರು.
ಅಷ್ಟೇ ಅಲ್ಲದೇ ಇಂಟೆಲಿಜೆನ್ಸ್ ಬ್ಯೂರೋ(ಐಬಿ) ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹಲವಾರು ನಗರಗಳಲ್ಲಿ ದಾಳಿ ನಡೆಯಬಹುದಾಗಿ ಎಚ್ಚರಿಕೆಯನ್ನೂ ನೀಡಿದೆ. ಐಬಿ ನೀಡಿರುವ ಕೆಲವು ಪ್ರಮುಖ ಎಚ್ಚರಿಕೆಗಳು ಇಂತಿವೆ. ಇದನ್ನೂ ಓದಿ: ಬಂಧಿತ ಉಗ್ರರ ವಿಚಾರಣೆಯ ವೇಳೆ ಮಾಹಿತಿ ಬಹಿರಂಗ- ಗುಪ್ತಚರ ಇಲಾಖೆಯಿಂದ ಎಚ್ಚರಿಕೆ
ಆಗಸ್ಟ್ 15 ರಂದು ಕೆಂಪು ಕೋಟೆಯಲ್ಲಿ ನಡೆಯಲಿರುವ ಧ್ವಜಾರೋಹಣ ಸಮಾರಂಭದಲ್ಲಿ ಭಯೋತ್ಪಾದಕರು ಸುಧಾರಿತ ಸ್ಫೋಟಕ ಸಾಧನಗಳನ್ನು ಬಳಸಬಹುದೆಂದು ಕಾನೂನು ಜಾರಿ ಸಂಸ್ಥೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಇದಲ್ಲದೇ ಪಾಕಿಸ್ತಾನದಿಂದ ಪಂಜಾಬ್‍ನ ಗಡಿ ಮೂಲಕ ದೆಹಲಿಗೆ ಡ್ರೋನ್‍ಗಳು ಪ್ರವೇಶಿಸುವ ಸಾಧ್ಯತೆಗಳಿವೆ. ಇತ್ತೀಚೆಗೆ ಬಂಧನಕ್ಕೊಳಗಾದ ಉಗ್ರರ ವಿಚಾರಣೆ ವೇಳೆ ಈ ವಿಷಯ ತಿಳಿದುಬಂದಿರುವುದಾಗಿ ಮಾಹಿತಿ ಲಭಿಸಿದೆ. ಇದನ್ನೂ ಓದಿ: ಟಾಯ್ಲೆಟ್‍ನಲ್ಲಿ ಬ್ಯಾಂಕ್ ಸಿಬ್ಬಂದಿಯನ್ನು ಕೂಡಿ ಹಾಕಿ ಕೆಜಿಗಟ್ಟಲೆ ಚಿನ್ನ ಹೊತ್ತೊಯ್ದರು