LatestMain PostNational

ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್- ಪೊಲೀಸ್ ಅಧಿಕಾರಿ ವಜಾ

Advertisements

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‍ಗಳನ್ನು ಮಾಡಿದ್ದ ಪೊಲೀಸ್ ಅಧಿಕಾರಿಯನ್ನು ಅವರ ಹುದ್ದೆಯಿಂದ ವಜಾ ಮಾಡಲಾಗಿದೆ.

ಧ್ಯಾನೇಂದ್ರ ಪ್ರತಾಪ್ ವಜಾಗೊಂಡ ಅಧಿಕಾರಿ. ಅಸಂದ್ರ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಧ್ಯಾನೇಂದ್ರ ಪ್ರತಾಪ್ ಸಿಂಗ್ ಅವರು ತಮ್ಮ ಕಚೇರಿಯ ಕೊಠಡಿಯಲ್ಲಿ ಮಾತನಾಡುತ್ತಿದ್ದಾಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾರೆ.

POLICE JEEP

ಈ ಸಂಭಾಷಣೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಶಶಾಂಕ್ ಕುಶುಮೇಶ್ ಅವರು  ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ವತ್ಸ್ ಅವರಿಗೆ ಅಧಿಕಾರಿಯ ವಿರುದ್ಧ ದೂರು ನೀಡಿದ್ದಾರೆ. ಅಷ್ಟೇ ಅಲ್ಲದೇ ಸರ್ಕಾರದ ಹುದ್ದೆಯಲ್ಲಿರುವವರು ಸಾರ್ವಜನಿಕವಾಗಿ ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಸರ್ಕಾರದ ವಿರುದ್ಧ ಧಂಗೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಕೂಡಲೇ ವಿಚಾರಣೆಗೆ ಹಾಜರಾಗಿ – ಬಂಗಾಳ ಪೊಲೀಸರಿಂದ ನೂಪುರ್‌ಗೆ ಕೊನೆಯ ಎಚ್ಚರಿಕೆ

ಈ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿ, ಯೋಗಿ ಆದಿತ್ಯನಾಥ್ ಅವರ ವಿರುದ್ಧ ಧ್ಯಾನೇಂದ್ರ ಪ್ರತಾಪ್‍ವೊಬ್ಬರು ಕಾಮೆಂಟ್ ಮಾಡಿದ್ದಾರೆ ಎಂದು ಆರೋಪಿಸಿರುವ ವೀಡಿಯೋವೊಂದು ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ವಜಾ ಮಾಡಲಾಗಿದ್ದು, ಈ ಬಗ್ಗೆ ಇನ್ನೂ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಬ್ರಿಟನ್ ಪ್ರಧಾನಿ ಬೋರಿಸ್ ರಾಜೀನಾಮೆ ಘೋಷಣೆ

Live Tv

Leave a Reply

Your email address will not be published.

Back to top button