ಲಕ್ನೋ: ಮಹಿಳೆಯೊಬ್ಬರ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ ಸಬ್ ಇನ್ಸ್‌ಪೆಕ್ಟರ್‌ನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಉತ್ತರ ಪ್ರದೇಶದ (Uttar Pradesh) ಆಗ್ರಾದಲ್ಲಿ (Agra) ನಡೆದಿದೆ. ಬಳಿಕ ಆತನನ್ನು ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು (Police) ತಿಳಿಸಿದ್ದಾರೆ.
ಗ್ರಾಮಸ್ಥರು ಸಬ್ ಇನ್ಸ್‌ಪೆಕ್ಟರ್ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹರಿದಾಡುತ್ತಿರುವ ವೀಡಿಯೋದಲ್ಲಿ ಗ್ರಾಮಸ್ಥರು ಸಂದೀಪ್ ಕುಮಾರ್ ಎಂಬಾತನನ್ನು ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಈ ಘಟನೆ ನಡೆದ ಬಳಿಕ ಆಗ್ರಾದ ಪೊಲೀಸ್ ಆಯುಕ್ತರು, ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ. ಅಲ್ಲದೇ ಈ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ. ಇದನ್ನೂ ಓದಿ: ಉಗ್ರ ನಿಜ್ಜರ್ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ: ಕೆನಡಾ ಗಂಭೀರ ಆರೋಪ
Advertisement
Advertisement
ಘಟನೆ ಸಂಬಂಧ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅಲ್ಲದೇ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆಯನ್ನೂ ನಡೆಸಿದ್ದಾರೆ. ಆದರೆ ಆರೋಪಿ ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾನೆ. ಪ್ರಕರಣವೊಂದರ ತನಿಖೆಗೆ ತೆರಳಿದ್ದಾಗ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾನೆ.
Advertisement
Advertisement
ಆರೋಪಿ ಎರಡು ವರ್ಷಗಳ ಹಿಂದೆಯಷ್ಟೇ ಪೊಲೀಸ್ ಇಲಾಖೆಗೆ ಸೇರಿದ್ದ ಎಂದು ತಿಳಿದು ಬಂದಿದೆ. ಪ್ರಕರಣದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೋಟಿ ಕೋಟಿ ವಂಚನೆ ಪ್ರಕರಣ – ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿಗೆ ಸಿಸಿಬಿ ಆಕ್ಷೇಪಣೆ ಸಾಧ್ಯತೆ
Web Stories