ಭೋಪಾಲ್: ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸಿ ಡಿಕ್ಕಿ ಹೊಡೆದು ಇಬ್ಬರಿಗೆ ಗಾಯಗೊಳಿಸಿದ್ದ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಪೊಲೀಸ್ ಅನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಘಟನೆ ಭಾನುವಾರ ರಾತ್ರಿ ನೆರೆಯ ಖಾರ್ಗೋನ್ ಜಿಲ್ಲೆಯ ಭಿಕಂಗಾವ್ ಪಟ್ಟಣದಲ್ಲಿ ನಡೆದಿದ್ದು, ಪಂಧಾನ ಪೊಲೀಸ್ ಠಾಣೆಯ ಉಸ್ತುವಾರಿಯಾಗಿದ್ದ ಆಂತಿಮ್ ಪವಾರ್ ಅವರನ್ನು ಅಮಾನತುಗೊಳಿಸಲಾಗಿದೆ ಮತ್ತು ಕ್ಷೇತ್ರ ಕರ್ತವ್ಯದಿಂದ ತೆಗೆದುಹಾಕಲಾಗಿದೆ ಎಂದು ಖಾಂಡ್ವಾ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಸಿಂಗ್ ಸೋಮವಾರ ಹೇಳಿದ್ದಾರೆ. ಇದನ್ನೂ ಓದಿ: ಅಫ್ಘಾನ್ ಹುಡುಗಿಯರ ಪರ ನಿಂತ ಮಲಾಲಾ ಯೂಸುಫ್ ಝಾಯಿ
ಪ್ರಕರಣ ಕುರಿತಂತೆ ವೈದ್ಯಕೀಯ ಪರೀಕ್ಷೆಯಲ್ಲಿ ಆತ ಮದ್ಯದ ಅಮಲಿನಲ್ಲಿದ್ದ ಎಂಬ ವಿಚಾರ ದೃಢಪಟ್ಟಿದೆ. ಅಲ್ಲದೇ ಸಮವಸ್ತ್ರ ಧರಿಸಿದ್ದ ಪವಾರ್ ನಿಯಂತ್ರಣ ತಪ್ಪಿ ಎಸ್‍ಯುವಿ ಭಿಕಾಂಗಾವ್‍ನ ವಿವಿಧ ಸ್ಥಳಗಳಲ್ಲಿ ಜನರಿಗೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಹಲವಾರು ಮಂದಿ ಓಡಿ ಹೋಗಿ ತಮ್ಮ ಪ್ರಾಣ ರಕ್ಷಿಸಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಚಿಕಿತ್ಸೆ ನೆಪದಲ್ಲಿ ರೋಗಿಗೆ ಲೈಂಗಿಕ ಕಿರುಕುಳ – ಸರ್ಕಾರಿ ವೈದ್ಯನ ಅಮಾನತು
ಇದೀಗ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 279 (ಸಾರ್ವಜನಿಕ ರಸ್ತೆಯಲ್ಲಿ ಅವಸರದ ಚಾಲನೆ) ಮತ್ತು 337 (ಜೀವಕ್ಕೆ ಅಪಾಯವನ್ನುಂಟುಮಾಡುವುದು ಅಥವಾ ಇತರರ ವೈಯಕ್ತಿಕ ಸುರಕ್ಷತೆ) ಅಡಿಯಲ್ಲಿ ಪವಾರ್ ವಿರುದ್ಧ ಭಿಕಂಗಾವ್‍ನಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.