ನವದೆಹಲಿ: ಟೆಂಪೋ ಚಾಲಕನ ಮೇಲೆ ಲಾಠಿ ಚಾರ್ಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ದೆಹಲಿಯ ಮುಖರ್ಜಿನಗರದಲ್ಲಿ ನಡೆದ ಅಪಘಾತದ ನಂತರ ಟೆಂಪೋ ಚಾಲಕ ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಜಗಳ ತಾರಕ್ಕೇರಿದ ಪರಿಣಾಮ ಓರ್ವ ಅಧಿಕಾರಿ ಗಾಯಗೊಂಡಿದ್ದಾರೆ. ಈಗ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
Advertisement
Advertisement
ವಿಡಿಯೋದಲ್ಲಿ ಹರಿತವಾದ ಆಯುಧವನ್ನು ಹಿಡಿದಿದ್ದ ವ್ಯಕ್ತಿಯನ್ನು ಪೊಲೀಸರು ಲಾಠಿಯಿಂದ ಥಳಿಸುತ್ತಿರುವುದು ಕಂಡು ಬಂದಿದೆ. ಅಲ್ಲದೆ ತಂದೆಯನ್ನು ಸಂಭಾಳಿಸಲು ಪ್ರಯತ್ನಿಸುತ್ತಿದ್ದ ಚಾಲಕನ ಮಗನ ಮೇಲೆ ಕೂಡ ಪೊಲೀಸರು ದೌರ್ಜನ್ಯವೆಸಗಿದ್ದಾರೆ. ಆದರೆ ಚಾಲಕ ರಸ್ತೆಯಲ್ಲಿ ಗಾಡಿಯನ್ನು ಬಹಳ ಅಪಾಯಾಕಾರಿ ರೀತಿಯಲ್ಲಿ ಚಲಾಯಿಸುತ್ತಿದ್ದ ಮತ್ತು ಪೊಲೀಸ್ ಅಧಿಕಾರಿಯ ತಲೆಗೆ ಆಯುಧದಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ತಕ್ಷಣವೇ ಈ ಘಟನೆ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಚಾಲಕ ಧರಿಸಿದ್ದ ರುಮಾಲಿನ ಕಾರಣದಿಂದ ಹಲ್ಲೆಗೊಳಗಾಗಿದ್ದು ಎಂದು ಬಿಜೆಪಿ ಶಾಸಕ ಮನ್ಜೀಂದ್ರನ್ ಸಿಂಗ್ ಆರೋಪಿಸಿದ್ದಾರೆ. ಅಲ್ಲದೆ ಕೆಲ ನಾಯಕರು ಮುಖರ್ಜಿನಗರದ ಪೊಲೀಸ್ ಠಾಣೆಯ ಎದುರು ರಾತ್ರಿಯ ತನಕ ಪ್ರತಿಭಟನೆ ನಡೆಸಿದ್ದಾರೆ. ವರದಿಗಳ ಪ್ರಕಾರ ಸಿಂಗ್ ದೌರ್ಜನ್ಯವೆಸಗಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ.
Advertisement
ಖಾಸಗಿ ವಾಹಿನಿಯ ಮಾಹಿತಿಯ ಪ್ರಕಾರ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.