Connect with us

Districts

ಆದಿಚುಂಚನಗಿರಿ ಕೇತ್ರದ ಆಮ್ಲಜನಕ ಘಟಕ ಲೋಕಾರ್ಪಣೆ

Published

on

Share this

ಮಂಡ್ಯ: ಕೊರೊನಾ ಎದುರಿಸಲು ಆದಿಚುಂಚನಗಿರಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಸಾರ್ವಜನಿಕ ಹಿತದೃಷ್ಟಿಯಿಂದ ಹೆಚ್ಚಿನ ಸಾಮರ್ಥ್ಯವುಳ್ಳ ಆಮ್ಲಜನಕ ಉತ್ಪಾದನಾ ಘಟಕವನ್ನು ಇಂದು ಲೋಕಾರ್ಪಣೆಗೊಳಿಸಿದೆ.

ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ನಿರ್ಮಾಣಗೊಂಡಿದೆ. ಅಮ್ಲಜನಕ ಘಟಕವನ್ನು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ವರ್ಚುಯಲ್ ಮೂಲಕ ಉದ್ಘಾಟಿಸಿದರು.

ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಇರುವ ಎಐಎಂಎಸ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಈ ಘಟಕ ನಿರ್ಮಾಣಗೊಂಡಿದೆ. ಈ ಘಟಕ ಪ್ರತಿ ನಿಮಿಷಕ್ಕೆ 700 ಲೀಟರ್ ಆಮ್ಲಜನಕ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

ಆಮ್ಲಜನಕ ಕೊರತೆಯನ್ನು ಗಂಭೀರವಾಗಿ ಪರಿಗಣಿಸಿದ ಶ್ರೀಗಳು ಕುದುರೆಮುಖ ಕಬ್ಬಿಣದ ಅದಿರು ಕಂಪನಿಯೊಂದಿಗೆ ಮಾತುಕತೆ ನಡೆಸಿದ್ದರು. ಅಲ್ಲದೇ ತಮ್ಮ ಸಂಶೋಧನಾ ಸಂಸ್ಥೆಯ ಮುಖ್ಯಸ್ಥರನ್ನು ಒಳಗೊಂಡಂತೆ ವಿಶೇಷ ಸಮಿತಿಯೊಂದನ್ನು ರಚಿಸಿದ್ದರು. ಆ ಸಮಿತಿ ಆಮ್ಲಜನಕ ಉತ್ಪಾದನಾ ಘಟಕದ ಅಗತ್ಯದ ಬಗ್ಗೆ ಶಿಫಾರಸು ಮಾಡಿತ್ತು. ಅದರನ್ವಯ ಉಪಕರಣಗಳನ್ನು ಯುರೋಪ್‍ನಿಂದ ಆಮದು ಮಾಡಿಕೊಂಡು ಘಟಕವನ್ನು ಸ್ಥಾಪನೆ ಮಾಡಲಾಗಿದೆ. ಇದನ್ನೂ ಓದಿ:ಎಲ್ಲರಿಗೂ ಉಚಿತ ವ್ಯಾಕ್ಸಿನ್ ಕೊಡಬೇಕು, ಮೂರನೇ ಅಲೆಗೂ ಮುನ್ನ ಸರ್ವ ಪಕ್ಷ ಸಭೆ ಕರೆಯಬೇಕು: ರಾಮಲಿಂಗಾ ರೆಡ್ಡಿ

ಅತ್ಯುನ್ನತ ತಂತ್ರಜ್ಞಾನ ಹೊಂದಿರುವ ಈ ಘಟಕ ಒಂದು ನಿಮಿಷಕ್ಕೆ 700 ಲೀಟರ್ ಅನಿಲ ರೂಪದ ಆಮ್ಲಜನಕ ಉತ್ಪಾದಿಸುವ ಸಾಮರ್ಥ್ಯ ಹೊಂದಿದ್ದು, 143 ಸಿಲಿಂಡರ್ ಹೊಂದಿರುವ ಆಮ್ಲಜನಕ ಸಾಮರ್ಥ್ಯಕ್ಕೆ ಇದು ಸಮವಾಗಿದೆ. ಇದರಿಂದ ಏಕಕಾಲಕ್ಕೆ 150 ಆಮ್ಲಜನಕ ಅವಲಂಬಿತ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದ ಸ್ವಾಮೀಜಿ ಹೇಳಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಕೆಐಒಸಿ ಲಿಮಿಟೆಡ್ ಮುಖ್ಯಸ್ಥರು ಹಾಗೂ ಮಠದ ಮತ್ತಿತರರು ಭಾಗವಹಿಸಿದ್ದರು. ಇದನ್ನೂ ಓದಿ: ಸರ್ಕಾರದ ಅಕ್ರಮಗಳನ್ನು ಚರ್ಚೆ ಮಾಡಲು ಅಧಿವೇಶನ ಕರೆಯಿರಿ – ಎಚ್‍ಡಿಕೆ ಸವಾಲ್

Click to comment

Leave a Reply

Your email address will not be published. Required fields are marked *

Advertisement