ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕೊರೊನಾ ಸ್ಫೋಟಗೊಂಡಿದ್ದು, ಈ ಮೂಲಕ ಮತ್ತೆ ಜಿಲ್ಲೆಯನ್ನು ವೈರಸ್ ಕಾಡುತ್ತಿದೆ.
ತಮಿಳುನಾಡು ಪ್ರವಾಸ ಕೈಗೊಂಡಿದ್ದವರಲ್ಲಿ ಸೋಂಕು ಪತ್ತೆಯಾಗಿದೆ. ಓಂ ಶಕ್ತಿ ದೇವಾಲಯಕ್ಕೆ ಹೋಗಿ ಬಂದಿದ್ದ 30ಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಶ್ರೀರಂಗಪಟ್ಟಣ ತಾಲೂಕಿನ ಹಳ್ಳಿಗಳಿಂದ ಜನ ದೇವಾಲಯಕ್ಕೆ ತೆರಳಿದ್ದರು.
ಕಳೆದ ವಾರ 6 ಬಸ್ಗಳಲ್ಲಿ ದೇವಾಲಯಕ್ಕೆ ತೆರಳಿದ್ದರು. ಈವರೆಗೆ ವಾಪಾಸ್ಸಾದ 4 ಬಸ್ನಲ್ಲಿದ್ದ ಭಕ್ತರಲ್ಲಿ 30ಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಇಂದು ಅಥವಾ ನಾಳೆ ಮತ್ತೆರಡು ಬಸ್ ಶ್ರೀರಂಗಪಟ್ಟಣಕ್ಕೆ ವಾಪಾಸ್ಸಾಗುವ ಸಾಧ್ಯತೆ ಇದೆ. ಆರೋಗ್ಯ ಸಿಬ್ಬಂದಿ ತಮಿಳುನಾಡಿನಿಂದ ವಾಪಸ್ಸಾದವರ ಟೆಸ್ಟ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಚಿಕನ್, ಪೋರ್ಕ್, 5 ಕ್ವಾಟರ್ ಎಣ್ಣೆ ಜೊತೆ ಪಾರ್ಟಿ – ಬೆಳಗಾಗುವಷ್ಟರಲ್ಲಿ ಅತ್ತೆ ಮರ್ಡರ್!
ಪಾಸಿಟಿವ್ ಬಂದವರು ವಸತಿ ಶಾಲೆಗಳಲ್ಲಿ ಕ್ವಾರಂಟೈನ್ ಆಗಿದ್ದಾರೆ. ಸೋಂಕಿತರ ಪ್ರಾಥಮಿಕ, ದ್ವಿತೀಯ ಸಂಪರ್ಕಿತರಿಗೂ ಪರೀಕ್ಷೆ ನಡೆಸಲಾಗುತ್ತಿದೆ. ಕೊರೊನಾ ಪ್ರಕರಣಗಳು ಹೆಚ್ಚಳ ಹಿನ್ನೆಲೆ ಶ್ರೀರಂಗಪಟ್ಟಣದಲ್ಲಿ ಆತಂಕ ಮನೆ ಮಾಡಿದೆ.