ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕೊರೊನಾ ಮತ್ತು ಓಮಿಕ್ರಾನ್ ಪ್ರಕರಣ ಸಂಖ್ಯೆ ಏರಿಕೆ ಕಾಣುತ್ತಿದ್ದಂತೆ ಇತ್ತ ಲಾಕ್‍ಡೌನ್ ಮೊರೆ ಹೋಗುವ ಸಾಧ್ಯತೆ ಹೆಚ್ಚಿದೆ. ಈಗಾಗಲೇ ನಾಳೆಯಿಂದ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿ ಕಚೇರಿಗಳಲ್ಲಿ ಶೇ.50 ಉದ್ಯೋಗಿಗಳು ಮಾತ್ರ ಕೆಲಸ ನಿರ್ವಹಿಸಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ.
Advertisement
ನಿನ್ನೆ ಒಂದೇ ದಿನ ಪಶ್ಚಿಮ ಬಂಗಾಳದಲ್ಲಿ 4,512 ಕೋವಿಡ್-19 ಪ್ರಕರಣಗಳು ದಾಖಲಾಗಿತ್ತು. ಈಗಾಗಲೇ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಸರ್ಕಾರ ಜಾರಿ ಮಾಡಿದೆ. ಆದರೂ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿರುವುದರಿಂದಾಗಿ ನಾಳೆಯಿಂದ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲು ನಿರ್ಧರಿಸಿದ್ದು, ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಶೇ.50 ಉದ್ಯೋಗಿಗಳು ಮಾತ್ರ ಕೆಲಸ ನಿರ್ವಹಿಸಬೇಕು. ಉಳಿದಂತೆ ವರ್ಕ್‍ಫ್ರಮ್ ಹೋಮ್ ನಿರ್ವಹಿಸಲು ಅವಕಾಶ ಮಾಡಿಕೊಡುವಂತೆ ಸರ್ಕಾರ ಸೂಚನೆ ಹೊರಡಿಸಿದೆ. ಇದನ್ನೂ ಓದಿ: ಕೋವಿಡ್ ಹೆಚ್ಚಾದ್ರೆ ಪಶ್ಚಿಮ ಬಂಗಾಳದಲ್ಲಿ ಶಾಲಾ-ಕಾಲೇಜ್ ಬಂದ್: ಮಮತಾ ಬ್ಯಾನರ್ಜಿ
Advertisement
Advertisement
ಜಿಮ್, ಬ್ಯೂಟಿ ಪಾರ್ಲರ್, ಸೆಲೂನ್, ಈಜುಕೊಳಗಳನ್ನು ಮುಚ್ಚುವಂತೆ ಸೂಚಿಸಲಾಗಿದ್ದು, ಈಗಾಗಲೇ ಲಾಕ್‍ಡೌನ್ ಅಸ್ತ್ರದೆಡೆಗೆ ಸರ್ಕಾರ ಹೆಜ್ಜೆ ಇಟ್ಟಿದೆ. ಮೆಟ್ರೋ ಸೇವೆಗಳನ್ನು ಶೇ.50 ಜನರೊಂದಿಗೆ ಮಾತ್ರ ನಿರ್ವಹಿಸಲು ಆದೇಶಿಸಿದ್ದು, ಲೋಕಲ್ ರೈಲುಗಳನ್ನು ಸಂಜೆ 7 ಗಂಟೆ ವರೆಗೆ ಮಾತ್ರ ಸಂಚರಿಸಲು ಅವಕಾಶ ನೀಡಿದೆ. ಇದನ್ನೂ ಓದಿ: ಕೋವಿಡ್-19 ಪ್ರಕರಣಗಳು ಏರಿಕೆಯಾಗಿದೆ, ಆದ್ರೆ ಆತಂಕ ಪಡಬೇಡಿ: ಅರವಿಂದ್ ಕೇಜ್ರಿವಾಲ್
Advertisement
ಈಗಾಗಲೇ ಪಶ್ಚಿಮ ಬಂಗಾಳದಲ್ಲಿ 13,000ಕ್ಕೂ ಹೆಚ್ಚು ಸಕ್ರಿಯ ಪ್ರಕರಣವಿದ್ದು, ದೇಶದಲ್ಲಿ ಮಹಾರಾಷ್ಟ್ರ ಮತ್ತು ಕೇರಳ ಬಳಿಕ ಅತಿ ಹೆಚ್ಚು ಕೇಸ್ ಹೊಂದಿರುವ ರಾಜ್ಯವಾಗಿ ಗುರುತಿಸಿಕೊಂಡಿದೆ. ಇದನ್ನೂ ಓದಿ: 8 ಲಕ್ಷಕ್ಕೆ ಹೆಣ್ಣು ಮಕ್ಕಳನ್ನು ಮಾರಾಟ ಮಾಡಿದ ತಂದೆ ಅರೆಸ್ಟ್