ಮಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ ಏರ್‌ಪೋರ್ಟಿನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿಯಲ್ಲಿ ವೈರಸ್ ಬರದಂತೆ ತಡೆಗಟ್ಟಲು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಯಂತ್ರಗಳನ್ನು ಅಳವಡಿಸಲಾಗಿದೆ. ದುಬೈ ಸೇರಿದಂತೆ ಎಲ್ಲಾ ದೇಶಗಳಿಂದ ಬರುವ ವಿಮಾನದಲ್ಲಿ ಹೆಚ್ಚುವರಿ ತಪಾಸಣೆ ಮಾಡಲಾಗುತ್ತಿದ್ದು, ಹಡಗಿನ ಮೂಲಕ ಬರುವವರಿಗೂ ಸೂಕ್ತ ತಪಾಸಣೆ ನಡೆಸಲಾಗುತ್ತಿದೆ. ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಐಸೋಲೇಟರ್ ವಾರ್ಡ್ ನಿರ್ಮಾಣ ಮಾಡಲಾಗಿದೆ.
ಕರ್ನಾಟಕ ಗಡಿ ಜಿಲ್ಲೆಗಳಲ್ಲಿ ಕರೋನಾ ಕಟ್ಟೆಚ್ಚರ ವಹಿಸಲಾಗಿದ್ದು, ಆಂಧ್ರ, ತೆಲಂಗಾಣ, ಕೇರಳ ಗಡಿಯಲ್ಲಿ ಎಚ್ಚರಿಕೆ ನೀಡಲಾಗಿದೆ. ಬಳ್ಳಾರಿ, ಕಲಬುರುಗಿ, ಬೆಳಗಾವಿ, ಚಾಮರಾಜನಗರ, ರಾಯಚೂರು ಭಾಗಗಳಲ್ಲಿ ಕೂಡ ಎಚ್ಚರಿಕೆ ವಹಿಸಲಾಗುತ್ತಿದೆ. ಇದನ್ನೂ ಓದಿ: ಆಂಧ್ರದ ಟೆಕ್ಕಿಗೆ ಕೊರೊನಾ : ಬೆಂಗ್ಳೂರಲ್ಲಿ ಲ್ಯಾಂಡ್ ಆಗಿದ್ರೂ ಪತ್ತೆ ಆಗಲಿಲ್ಲ ಯಾಕೆ?-ಟೆಕ್ಕಿಗೆ ಕೊರೊನಾ ಬಂದಿದ್ದು ಹೇಗೆ?
ಇತ್ತ ಬೆಂಗಳೂರು ಟೆಕ್ಕಿಗೆ ಕೊರೊನಾ ಜ್ವರ ಕಂಡು ಬಂದ ಹಿನ್ನೆಲೆಯಲ್ಲಿ ನಗರದ ಖಾಸಗಿ ಕಂಪನಿಗಳ ಮೇಲೆ ನಿಗಾ ವಹಿಸಲಾಗಿದೆ. ಅಲ್ಲದೆ ಖಾಸಗಿ ಕಂಪನಿಗಳ ನೌಕರರ ಮೇಲೆ ನಿಗಾಕ್ಕೆ ಸೂಚನೆ ನೀಡಲಾಗಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.