ಬೆಂಗಳೂರು: ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅವರು ಕೊರೊನಾ ಪರೀಕ್ಷೆ ಮಾಡಿದ್ದು ಫಲಿತಾಂಶ ನೆಗೆಟಿವ್ ಬಂದಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕಳೆದ ಕೆಲವು ದಿನಗಳಿಂದ ನಾನು ಸಾಕಷ್ಟು ಸಂಚಾರ ಮಾಡಿದ್ದೇನೆ, ಜನರ ಒಡನಾಟದಲ್ಲಿದ್ದೇನೆ, ಮೊನ್ನೆ ಅಗತ್ಯ ಮುಂಜಾಗ್ರತೆಯೊಂದಿಗೆ ಕೊರೊನಾ ಇಂದ ಸಾವಿಗೀಡಾದ ಮಹಿಳೆಯ ಅಂತ್ಯ ಸಂಸ್ಕಾರದಲ್ಲೂ ಭಾಗವಹಿಸಿದ್ದೆ. ಕೊರೊನಾವೆಂಬ ಮಾರಕ ಕಾಯಿಲೆ ಯಾರಿಗೆ ಬೇಕಾದರೂ ಹಬ್ಬುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ ಎಂದು ಬರೆದುಕೊಂಡಿದ್ದಾರೆ.
Advertisement
ಕಳೆದ ಕೆಲವು ದಿನಗಳಿಂದ ನಾನು ಸಾಕಷ್ಟು ಸಂಚಾರ ಮಾಡಿದ್ದೇನೆ, ಜನರ ಒಡನಾಟದಲ್ಲಿದ್ದೇನೆ, ಮೊನ್ನೆ ಅಗತ್ಯ ಮುಂಜಾಗ್ರತೆಯೊಂದಿಗೆ ಕೊರೊನಾ ಇಂದ ಸಾವಿಗೀಡಾದ ಮಹಿಳೆಯ ಅಂತ್ಯ ಸಂಸ್ಕಾರದಲ್ಲೂ ಭಾಗವಹಿಸಿದ್ದೆ. ಕೊರೊನಾವೆಂಬ ಮಾರಕ ಕಾಯಿಲೆ ಯಾರಿಗೆ ಬೇಕಾದರೂ ಹಬ್ಬುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ. 1/2#COVID19 pic.twitter.com/Mpw3Asc3uR
— B Z Zameer Ahmed Khan (@BZZameerAhmedK) April 27, 2020
Advertisement
ಜನರ ಕಷ್ಟಕ್ಕೆ ಸ್ಪಂದಿಸುವುದಷ್ಟೇ ಅಲ್ಲ ನನ್ನಿಂದ ಇತರರಿಗೆ ಬೇರೆ ಯಾವ ರೀತಿಯ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಸ್ವತಃ ನಾನೇ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದು, ವರದಿಯಲ್ಲಿ ನೆಗೆಟಿವ್ ಬಂದಿದೆ. ಇದರಿಂದ ಕಷ್ಟದಲ್ಲಿರುವ ಜನರಿಗೆ ಇನ್ನಷ್ಟು ಸಹಾಯ ಮಾಡಲು ನನಗೆ ಬಲ ಬಂದಿದೆ ಎಂದು ಹೇಳಿದ್ದಾರೆ.
Advertisement
ಜನರ ಕಷ್ಟಕ್ಕೆ ಸ್ಪಂದಿಸುವುದಷ್ಟೇ ಅಲ್ಲ ನನ್ನಿಂದ ಇತರರಿಗೆ ಬೇರೆ ಯಾವ ರೀತಿಯ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಸ್ವತಃ ನಾನೇ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದು, ವರದಿಯಲ್ಲಿ ನೆಗೆಟಿವ್ ಬಂದಿದೆ. ಇದರಿಂದ ಕಷ್ಟದಲ್ಲಿರುವ ಜನರಿಗೆ ಇನ್ನಷ್ಟು ಸಹಾಯ ಮಾಡಲು ನನಗೆ ಬಲ ಬಂದಿದೆ. 2/2#COVID19
— B Z Zameer Ahmed Khan (@BZZameerAhmedK) April 27, 2020
Advertisement
ಜಮೀರ್ ಅಹಮದ್ ಅವರ ವಿಧಾನಸಭಾ ವ್ಯಾಪ್ತಿಯ ಪಾದರಾಯನಪುರದಲ್ಲಿ ಹೆಚ್ಚಿನ ಪ್ರಮಾಣ ಸೋಂಕಿತರ ಪತ್ತೆಯಾದ ಹಿನ್ನೆಲೆಯಲ್ಲಿ ಜಮೀರ್ ಅಹಮದ್ ಅವರನ್ನು ಪರೀಕ್ಷೆ ನಡೆಸಬೇಕೆಂಬ ಮಾತು ಕೇಳಿ ಬಂದಿತ್ತು.
ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಪರೀಕ್ಷೆಗೆ ಒಳಪಟ್ಟಿದ್ದರು. ಇವರ ಫಲಿತಾಂಶವೂ ನೆಗೆಟಿವ್ ಬಂದಿತ್ತು.