ಬೆಂಗಳೂರು: ಇನ್ನು ಮುಂದೆ ವಾಟ್ಸಪ್ ನಲ್ಲಿ 30 ಸೆಕೆಂಡ್ ವಿಡಿಯೋ ಸ್ಟೇಟಸ್ ಅಪ್‍ಡೇಟ್ ಮಾಡಲು ಸಾಧ್ಯವಿಲ್ಲ. ಕೇವಲ 15 ಸೆಕೆಂಡ್ ಮಾತ್ರ ಸ್ಟೇಟಸ್ ಅಪ್‍ಡೇಟ್ ಆಗಲಿದೆ.
ಹೌದು. ವಿಶ್ವದಲ್ಲಿ ಲಾಕ್ ಡೌನ್ ಘೋಷಣೆಯಾದ ಬಳಿಕ ಇಂಟರ್ನೆಟ್ ಬಳಕೆ ಹೆಚ್ಚಾಗಿದೆ. ಆದರಲ್ಲೂ ವಾಟ್ಸಪ್ ಚಾಟ್ ಮಾಡುವವರ ಸಂಖ್ಯೆ ಗಣನೀಯ ಪ್ರಮಾಣಲ್ಲಿ ಏರಿಕೆಯಾಗಿದೆ.
Advertisement
Note: some users might be still able to post videos having a longer duration.
The change should be rolled out for more Indian users soon. https://t.co/KZFhj5OMtZ
— WABetaInfo (@WABetaInfo) March 28, 2020
Advertisement
ಈ ಹಿನ್ನೆಲೆಯಲ್ಲಿ ಸರ್ವರ್ ಗೆ ಬೀಳುತ್ತಿರುವ ಟ್ರಾಫಿಕ್ ಒತ್ತಡವನ್ನು ಕಡಿಮೆ ಮಾಡಲು ವಾಟ್ಸಪ್ ಈ ನಿರ್ಧಾರಕ್ಕೆ ಬಂದಿದೆ.
Advertisement
ಭಾರತದಲ್ಲಿ ತಾತ್ಕಾಲಿಕವಾಗಿ ಈ ನಿರ್ಧಾರಕ್ಕೆ ಬರಲಾಗಿದ್ದು, ಲಾಕ್ ಡೌನ್ ತೆರವು ಮಾಡಿದ ನಂತರ ಪರಿಸ್ಥಿತಿ ಸುಧಾರಿಸಿದರೆ ಮೊದಲಿನಂತೆ 30 ಸಕೆಂಡ್ ವಿಡಿಯೋ ಸ್ಟೇಟಸ್ ಅಪ್‍ಡೇಟ್ ಮಾಡಬಹುದು.
Advertisement
ಕೊರೊನಾದಿಂದ ವಿಶ್ವಾದ್ಯಂತ ಹಲವು ರಾಷ್ಟ್ರಗಳು ಲಾಕ್‍ಡೌನ್ ಘೋಷಿಸಿದ ಪರಿಣಾಮ ನೆಟ್ ಬಳಕೆ ಹೆಚ್ಚಾಗಿದೆ. ನೆಟ್‍ಫ್ಲಿಕ್ಸ್, ಹಾಟ್ ಸ್ಟಾರ್, ಅಮೆಜಾನ್ ಪ್ರೈಂ, ಸಾಮಾಜಿಕ ಜಾಲತಾಣ ಕಂಪನಿಗಳ ವಿಡಿಯೋಗಳು ರೆಸೊಲ್ಯೂಷನ್ ಕಡಿಮೆಯಾಗಿದೆ.