ಬೆಂಗಳೂರು: ಜನರ ಜೀವ ಮತ್ತು ಜೀವನ ಎರಡನ್ನೂ ಗಮನದಲ್ಲಿಟ್ಟುಕೊಂಡು ಲಾಕ್‍ಡೌನ್ ಕುರಿತು ನಿರ್ಧಾರ ಮಾಡುತ್ತೇವೆ. ಸಾರ್ವಜನಿಕರಿಗೂ ಸಹಾಯ ಆಗುವಂತೆ ನಿರ್ಧಾರವನ್ನು ನಾಳೆ ಸಿಎಂ ಪ್ರಕಟಿಸುತ್ತಾರೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಜೀವ ಉಳಿಸುವುದಕ್ಕಾಗಿ ಕಠಿಣ ನಿರ್ಧಾರ ಅನಿವಾರ್ಯ. ನಾಳೆ ಮಧ್ಯಾಹ್ನ 1 ಗಂಟೆಗೆ ಕೋವಿಡ್ ಹೊಸ ಗೈಡ್‍ಲೈನ್ ಸಂಬಂಧಿಸಿದಂತೆ ಸಿಎಂ ಸಭೆ ಕರೆದಿದ್ದಾರೆ. ಕೋವಿಡ್ ನಿರ್ವಹಣೆ ಸಮಿತಿ ಸದಸ್ಯರು, ಸಚಿವರು, ತಜ್ಞರು ಈ ಸಭ ಸಭೆಯಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದರು.
Advertisement
Advertisement
ಇದುವರೆಗೆ ಎಲ್ಲಾ ಪಕ್ಷಗಳ ನಾಯಕರು ಅವರ ವೈಯಕ್ತಿಕ ಹೇಳಿಕೆ ಕೊಟ್ಟಿದ್ದಾರೆ. ಕೆಲವರು ನಿಬರ್ಂಧ ತೆಗೆಯಬೇಕು ಎಂದು ಒತ್ತಾಯಿಸಿದ್ದಾರೆ. ಸಂಘ ಸಂಸ್ಥೆಗಳ ಹೇಳಿಕೆಗಳನ್ನು ನಾವು ಗಮನಿಸಿದ್ದೇವೆ. ಜೊತೆಗೆ ತಜ್ಞರ ವರದಿ ಗಮನದಲ್ಲಿಟ್ಟುಕೊಂಡು ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.
Advertisement
ಕೇಂದ್ರ ಸರ್ಕಾರ ಸಹ ವಿದೇಶಿ ವಿಮಾನಯಾನ ಓಡಾಟ ರದ್ದು ಮಾಡಿದೆ. ಆದರೆ ರಾಜ್ಯದಲ್ಲಿ ಕೋವಿಡ್ ಕಂಟ್ರೋಲ್‍ನಲ್ಲಿ ಇರುವ 18 ಜಿಲ್ಲೆಗಳೂ ಇವೆ. ಅದನ್ನು ಗಣನೆಗೆ ತೆಗೆದುಕೊಳ್ಳುತ್ತೇವೆ. ಬೆಂಗಳೂರಿನಲ್ಲಿ ದಿನೇ ದಿನೇ ಸೋಂಕು ಹೆಚ್ಚಾಗುತ್ತಾ ಇದೆ. ಮುಂದಿನ ದಿನಗಳಲ್ಲಿ ಹೇಗೆ ಏರಿಕೆ ಆಗುತ್ತದೆ ಎಂದು ಸಚಿವ ಸುಧಾಕರ್ ಕೂಡ ಹೇಳಿದ್ದಾರೆ ಎಂದರು.
Advertisement
ಈಗ ನಿಧಾನವಾಗಿ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಆಸ್ಪತ್ರೆ ಹೋಗುವವರ ಸಂಖ್ಯೆ ಹೆಚ್ಚುತ್ತಿದೆ. ಕೇವಲ ಬ್ಯುಸಿನೆಸ್ ದೃಷ್ಟಿ ಮಾತ್ರ ಅಲ್ಲ, ಎಲ್ಲರಿಗೂ ಸಹಾಯ ಆಗುವ ನಿರ್ಧಾರ ಸಿಎಂ ತೆಗೆದುಕೊಳ್ಳತ್ತಾರೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಎಲ್ಲಾ ಜಿಲ್ಲೆಗಳಲ್ಲಿ ಡ್ರೋನ್ ಮೂಲಕ ಸರ್ವೆ: ಅಶೋಕ್
ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ. ನಾಯಕರು ಕೊಡುತ್ತಿರುವ ಹೇಳಿಕೆಗಳು ವೈಯಕ್ತಿಕವಾದದ್ದು. ತಜ್ಞರ ವರದಿ ಬಿಟ್ಟು ನಾವು ಏನೂ ನಿರ್ಧಾರ ಮಾಡುವುದಿಲ್ಲ. ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಮಾಡಿದ್ದು ತಜ್ಞರ ಅಭಿಪ್ರಾಯದ ಆಧಾರದ ಮೇಲೆಯೇ ಎಂದರು. ಇದನ್ನೂ ಓದಿ: ರೇಣುಕಾಚಾರ್ಯ, ಯತ್ನಾಳ್ ಭೇಟಿ – ಸಚಿವ ಸ್ಥಾನದ ಬಗ್ಗೆ ಚರ್ಚೆ
ಕೋವಿಡ್ ನಿಯಮ ಉಲ್ಲಂಘನೆ ಕುರಿತು ಮಾತನಾಡಿದ ಅವರು, ನಾವು ಪ್ರಜಾಪ್ರಭುತ್ವ ವ್ಯವಸ್ಥೆ ಅಡಿಯಲ್ಲೇ ಬದುಕುತ್ತಿರೋದು. ಯಾವುದೇ ಪಕ್ಷದ ನಾಯಕರಾದರೂ ನಿಯಮವನ್ನು ಉಲ್ಲಂಘನೆ ಮಾಡಿದರೇ ಅವರ ವಿರುದ್ಧ ಪೆÇಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.