ವಿದೇಶದಿಂದ ಬೆಂಗಳೂರಿಗೆ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

Public TV
1 Min Read
CORONA VIRUS 4

ಬೆಂಗಳೂರು: ವಿದೇಶಗಳಿಂದ ಇಲ್ಲಿಗೆ ಬರುವ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಯ ನೆಗೆಟಿವ್ ವರದಿ ಹಾಗೂ ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣಪತ್ರ ಹೊಂದಿರಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

ಕೆಲ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವುದರಿಂದ ವಿದೇಶಿ ಪ್ರಯಾಣಿಕರಿಗೆ ಇಲಾಖೆಯು ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿದೆ. ಇಂಗ್ಲೆಂಡ್, ಯುರೋಪ್, ಮಧ್ಯಪ್ರಾಚ್ಯ, ದಕ್ಷಿಣ ಆಫ್ರಿಕಾ, ಬ್ರೆಜಿಲ್, ಬಾಂಗ್ಲಾದೇಶ, ಬೋಟ್ಸವಾನಾ, ಚೀನಾ, ಮಾರಿಷಸ್, ನ್ಯೂಜಿಲೆಂಡ್, ಜಿಂಬಾಬ್ವೆ ದೇಶಗಳಿಂದ ಬರುವವರು ಸೋಂಕಿತರಾಗಿಲ್ಲ ಎನ್ನುವುದರ ಬಗ್ಗೆ ಆರ್‍ಟಿ-ಪಿಸಿಆರ್ ಪರೀಕ್ಷಾ ವರದಿ ಹೊಂದಿರಬೇಕು. ಆ ವರದಿಯು ಪ್ರಯಾಣದ ಮೊದಲಿನ 72 ಗಂಟೆಗಳ ಅವಧಿಯದ್ದಾಗಿರಬೇಕು. ಕೋವಿಡ್ ರೂಪಾಂತರ ತಳಿಗಳು ಪತ್ತೆ ಮತ್ತು ಸೋಂಕು ಹೆಚ್ಚುತ್ತಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.

corona virus 1 medium

ಪ್ರಯಾಣಕ್ಕೂ ಮೊದಲು ಸೇವಾಸಿಂಧು ಪೋರ್ಟಲ್‍ನಲ್ಲಿ ಸೋಂಕಿತರಾಗಿಲ್ಲ ಎನ್ನುವುದರ ಬಗ್ಗೆ ಪರೀಕ್ಷಾ ವರದಿಯನ್ನು ಅಪ್‍ಲೋಡ್ ಮಾಡಬೇಕು. ಪ್ರಯಾಣಿಕರ ಗಂಟಲು ದ್ರವ ಮಾದರಿಯನ್ನು ರಾಜ್ಯದ ಎಲ್ಲ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಬಂದರುಗಳ ಪ್ರವೇಶದ್ವಾರದ ಬಳಿ ಪಡೆಯಬೇಕು ಎಂದು ಹೇಳಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ 282 ಕೇಸ್ – 15 ಮಂದಿಯಲ್ಲಿ ಕಾಣಿಸಿಕೊಂಡ AY 12 ಪ್ರಭೇದ

CORONAVIRUS

ಲಸಿಕೆ ಪ್ರಮಾಣಪತ್ರದ ವಿಚಾರವಾಗಿ ದೇಶದೊಂದಿಗೆ ಒಪ್ಪಂದ ಮಾಡಿಕೊಂಡಿರುವ ಬ್ರಿಟನ್, ಫ್ರಾನ್ಸ್, ಜರ್ಮನಿ, ನೇಪಾಳ, ಬೆಲಾರಸ್, ಲೆಬನಾನ್, ಅರ್ಮೇನಿಯಾ, ಉಕ್ರೇನ್, ಬೆಲ್ಜಿಯಂ, ಹಂಗೇರಿ ಹಾಗೂ ಸರ್ಬಿಯಾ ದೇಶದಿಂದ ಇಲ್ಲಿಗೆ ಬಂದವರಿಗೆ ಪರೀಕ್ಷೆ ಇಲ್ಲದೆಯೇ ತೆರಳಲು ಅವಕಾಶ ಇರಲಿದೆ. ಆದರೆ ಅವರು 14 ದಿನಗಳು ಮನೆಯಲ್ಲಿಯೇ ನಿಗಾ ವ್ಯವಸ್ಥೆಗೆ ಒಳಪಡಬೇಕು ಎಂದು ಸೂಚಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *