ಮಡಿಕೇರಿ: ರಾಜ್ಯದಲ್ಲಿ ಈಗಾಗಲೇ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಕೆಲವೊಂದು ಜಿಲ್ಲೆಯಲ್ಲಿ ಶಾಲೆಗಳನ್ನು ಮುಚ್ಚಿ ಕಳೆದ ಬಾರಿಯಂತೆ ಅನ್‍ಲೈನ್ ಶಿಕ್ಷಣಕ್ಕೆ ಮೋರೆ ಹೋಗುತ್ತಿರುವುದು ಕಂಡು ಬರುತ್ತಿದೆ. ಇತ್ತ ಕೊಡಗು ಜಿಲ್ಲೆಯಲ್ಲಿಯೂ ನಿಧಾನವಾಗಿ ಪಾಸಿಟಿವ್ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದ್ದು ಆದರೂ ಕೂಡ ಸದ್ಯಕ್ಕೆ ಶಾಲೆಗಳನ್ನು ಮುಚ್ಚುವ ಅವಶ್ಯಕತೆ ಇಲ್ಲ ಎಂದು ಶಾಸಕ ಅಪ್ಪಚ್ಚು ರಂಜನ್ ಸ್ಪಷ್ಟಪಡಿಸಿದ್ದಾರೆ.
Advertisement
20 ದಿನಗಳಿಂದ ಪಾಸಿಟಿವ್ ಪ್ರಮಾಣ ಶೇಕಡ 2 ಹಂತಕ್ಕೆ ತಲುಪುತ್ತಿದೆ. ಅದರಲ್ಲೂ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಪೋಷಕರಲ್ಲಿ ಒಂದು ರೀತಿಯ ಅತಂಕ ಕಾಣಿಸಿಕೊಳ್ಳುತ್ತಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅಪ್ಪಚ್ಚು ರಂಜನ್, ಕೊಡಗಿನಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಇತರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದ್ರೆ ನಮ್ಮ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳು ಕಡಿಮೆ ಇರುವುದರಿಂದ ಸದ್ಯಕ್ಕೆ ಶಾಲೆಗಳನ್ನು ಮುಚ್ಚುವ ಅವಶ್ಯಕತೆ ಇಲ್ಲ ಎಂದರು. ಇದನ್ನೂ ಓದಿ: ಕಾಫಿನಾಡಿನ ಎರಡು ವಸತಿ ಶಾಲೆಯ 55 ಮಕ್ಕಳಿಗೆ ಕೊರೊನಾ
Advertisement
Advertisement
ಪಕ್ಕದ ಜಿಲ್ಲೆ ದಕ್ಷಿಣಕನ್ನಡ, ಬೆಂಗಳೂರು, ಮೈಸೂರಿನಲ್ಲಿ ಪ್ರಕರಣಗಳು ಹೆಚ್ಚು ಇರುವುದರಿಂದ ಈಗಾಗಲೇ ಜಿಲ್ಲೆಯ ಜನರಿಗೆ ಕೋವಿಡ್ ನಿಯಮಗಳನ್ನು ಪಾಲನೆ ಮಾಡಿಕೊಳ್ಳುವಂತೆ ಮನವಿ ಮಾಡಲಾಗಿದೆ. ಜಿಲ್ಲೆಯ ಜನರು ಸೂಕ್ತ ರೀತಿಯಲ್ಲಿ ಸ್ಪಂದನೆ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕೋವಿಡ್ ಸೋಂಕು ಉಲ್ಬಣಗೊಂಡರೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಶಾಲೆ ಬಂದ್ ಮಾಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಜನವರಿ ಅಂತ್ಯಕ್ಕೆ ನಿತ್ಯ 60 ಸಾವಿರ ಪ್ರಕರಣಗಳು ಪತ್ತೆ ಸಾಧ್ಯತೆ – ದೆಹಲಿಯಲ್ಲಿ ಖಾಸಗಿ ಕಚೇರಿಗಳು ಬಂದ್
Advertisement