ಹಾವೇರಿ: ಹಸಿರು ವಲಯದಲ್ಲಿದ್ದ ಹಾವೇರಿ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಮೊದಲ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಜಿಲ್ಲೆಯ ಸವಣೂರು ಮೂಲದ 32 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಏಪ್ರಿಲ್ 8 ರಂದು ಮುಂಬೈನಿಂದ ಮೂರು ಜನರು ಲಾರಿಯಲ್ಲಿ ಸವಣೂರಿಗೆ ರಾತ್ರಿ ಆಗಮಿಸಿದ್ದರು. ಸ್ಥಳೀಯ ಹಾಗೂ ಆಶಾ ಕಾರ್ಯಕರ್ತೆರ ಮಾಹಿತಿ ಹಿನ್ನೆಲೆ ಏಪ್ರಿಲ್ 29ಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಲಾಗಿತ್ತು. ಅಲ್ಲದೇ ಮೂವರ ಗಂಟಲು ದ್ರವವನ್ನು ಪರೀಕ್ಷೆಗೆ ಲ್ಯಾಬ್‍ಗೆ ಕಳುಹಿಸಲಾಗಿತ್ತು.
Advertisement
Advertisement
ಪರೀಕ್ಷೆಯಲ್ಲಿ 32 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಅಲ್ಲದೇ ಸೋಂಕಿತ ವ್ಯಕ್ತಿ 40 ವರ್ಷದ ಅಣ್ಣ ಹಾಗೂ 19 ವರ್ಷದ ಅಣ್ಣನ ಮಗನೊಂದಿಗೆ ಸವಣೂರಿಗೆ ಆಗಮಿಸಿದ್ದ ಮಾಹಿತಿಯನ್ನು ಅಧಿಕಾರಿಗಳು ಪಡೆದಿದ್ದಾರೆ.
Advertisement
ಉಳಿದಂತೆ ಸೋಂಕಿತನೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 21 ಜನರು ಕುಟುಂಬ ಸದಸ್ಯರು, ಸ್ನೇಹಿತರು ಹಾಗೂ ಚಿಕಿತ್ಸೆ ನೀಡಿದ ವೈದ್ಯರ ತಂಡವನ್ನು ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಸೋಂಕಿತನ ಜೊತೆ ದ್ವಿತೀಯ ಸಂಪರ್ಕ ಹೊಂದಿದ್ದ 14 ಜನರ ಪತ್ತೆ ಮಾಡಿ, ಅವರನ್ನು ಅವರ ಮನೆಗಳಲ್ಲಿ ಹೋಂ ಕ್ವಾರಂಟೈನ್ ಮಾಡಿರುವ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
Advertisement
ಸೋಂಕಿತ ವ್ಯಕ್ತಿ ವಾಸ ಮಾಡುತ್ತಿದ್ದ ಪ್ರದೇಶವನ್ನು ಸೀಲ್‍ಡೌನ್ ಮಾಡಲಾಗಿದ್ದು, ಸುತ್ತಲಿನ 5 ಕಿ.ಮೀ ವ್ಯಾಪ್ತಿಯನ್ನು ಬಫರ್ ಝೋನ್ ಎಂದು ಘೋಷಣೆ ಮಾಡಲಾಗಿದೆ. ಸೀಲ್‍ಡೌನ್ ಆಗಿರುವ ಪ್ರದೇಶದ ಜನರಿಗೆ ಅಗತ್ಯ ವಸ್ತುಗಳನ್ನ ಪೂರೈಸಲು ಜಿಲ್ಲಾಡಳಿತ ಕಂಟ್ರೋಲ್ ರೂಮ್ ಸ್ಥಾಪನೆ ಮಾಡಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಹೇಳಿದ್ದಾರೆ.