ಕಲಬುರ್ಗಿ: ಬಿಜೆಪಿ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ನನಗೆ ಯಾವುದೇ ಗಂಭೀರ ಲಕ್ಷಣಗಳು ಇಲ್ಲ ಎಂದು ತಿಳಿಸಿದ್ದಾರೆ.
ಕೋವಿಡ್ ಸೋಂಕು ದೃಢಪಟ್ಟ ಹಿನ್ನಲೆ ಬೆಂಗಳೂರಿನಲ್ಲಿ ಹೋಮ್ ಐಸೋಲೆಷನ್‍ನಲ್ಲಿರುವ ಶಾಸಕ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿ, ನನಗೆ ಯಾವುದೇ ಗಂಭೀರ ಲಕ್ಷಣಗಳು ಇಲ್ಲ. ಅದಾಗ್ಯೂ ವೈದ್ಯರ ಸಲಹೆ ಪಡೆದು ಆಸ್ಪತ್ರೆಗೆ ದಾಖಲಾಗುವ ಚಿಂತನೆಯಲ್ಲಿದ್ದೇನೆ. ನನ್ನೊಂದಿಗೆ ಸಂಪರ್ಕ ಹೊಂದಿರುವ ಹಾಗೂ ಕೊರೊನಾ ಲಕ್ಷಣಗಳುಳ್ಳವರು ತಪಾಸಣೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಖಾಸಗಿ ಲ್ಯಾಬ್‍ಗಳಲ್ಲೂ ಉಚಿತ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಎಎಪಿ ಆಗ್ರಹ
ಈಚೆಗಷ್ಟೇ ಜಿಲ್ಲೆಯ ಶಾಸಕ ಅಜಯಸಿಂಗ್ ಅವರಿಗೂ ಕೋವಿಡ್ ದೃಢಪಟ್ಟಿದೆ. ಅಲ್ಲದೇ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಕೋವಿಡ್ ಸೋಂಕು ತಗುಲಿದೆ.