ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 290 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, 10 ಜನರು ಸೋಂಕಿನಿಂದ ಮೃತ ಪಟ್ಟಿದ್ದಾರೆ.
ಬೆಂಗಳೂರು ನಗರದಲ್ಲಿ 137 ಜನರಲ್ಲಿ ಪಾಸಿಟಿವ್ ಪತ್ತೆಯಾಗಿದ್ದು, 6 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. 206 ಜನರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲಿ ಕೊರೊನಾ ಹೊಸ ತಳಿ ಬಂದಿದೆ: ಕೆ.ಸುಧಾಕರ್
ರಾಜ್ಯದಲ್ಲಿ 408 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,583 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,86,276 ಮಂದಿಗೆ ಕೊರೊನಾ ಬಂದಿದೆ. 29,39,647 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ 3.44% ರಷ್ಟಿದ್ದರೆ, ಪಾಸಿಟಿವಿಟಿ ರೇಟ್ 0.32% ರಷ್ಟಿದೆ.
ಇಂದು ರಾಜ್ಯದಲ್ಲಿ ಒಟ್ಟು 89,964 ಸ್ಯಾಂಪಲ್ (ಆರ್ಟಿಪಿಸಿಆರ್ 78,437 + 11,527 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 137, ಚಾಮರಾಜನಗರ 2, ಚಿಕ್ಕಮಗಳೂರು 6, ಚಿತ್ರದುರ್ಗ 1, ದಕ್ಷಿಣ ಕನ್ನಡ 30, ಧಾರವಾಡ 2, ಹಾಸನ 20, ಕಲಬುರಗಿ 3, ಕೊಡಗು 7, ಕೋಲಾರ 7, ಕೊಪ್ಪಳ 1, ಮಂಡ್ಯ 4, ಮೈಸೂರು 18, ಶಿವಮೊಗ್ಗ 03, ತುಮಕೂರು 26, ಉಡುಪಿ 4, ಉತ್ತರ ಕನ್ನಡ 1, ವಿಜಯಪುರ 1, ಬಾಗಲಕೋಟೆ, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ, ಹಾವೇರಿ, ರಾಯಚೂರು, ರಾಮನಗರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅವಶ್ಯಕತೆ ಬಿದ್ದರೆ ಮುಂದಿನ ದಿನಗಳಲ್ಲಿ ಪಠ್ಯ ಕಡಿತ: ಬಿ.ಸಿ.ನಾಗೇಶ್